ಬೆಂಗಳೂರು, ಫೆಬ್ರವರಿ 3: ಅಂಜನಾಪುರ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭಾರೀ ಆತಂಕ ಮೂಡಿಸಿದೆ. ಅಂಜನಾಪುರ 7ನೇ ಬ್ಲಾಕ್ ರಸ್ತೆಯಲ್ಲಿ ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಚಿರತೆರೆದ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ತುರಹಳ್ಳಿ ಅರಣ್ಯ ಪ್ರದೇಶದ ಸಮೀಪದಲ್ಲೇ ಅಂಜನಾಪುರ ಅರಣ್ಯದಿಂದಲೇ ಚಿರತೆ ನುಗ್ಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ