ಗೃಹ ಸಚಿವ ಡಾ.ಜಿ. ಪರಮೇಶ್ವರ್ಚಿತ್ರದ ಕ್ರೆಡಿಟ್ ಮೂಲ: ಗೂಗಲ್
ಬೆಂಗಳೂರು, ಫೆಬ್ರವರಿ 04: ವಿಶೇಷ ಅಧಿವೇಶನದ ಹೊತ್ತಲ್ಲಿಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಎಸ್ಸಿ, ಎಸ್ಟಿ ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಸಭೆ ನಡೆಯಿತು. ಈ ಹಿಂದೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೀಡಿದ್ದ ಸೂಚನೆ ಈ ಸಭೆ ನಡೆದಿದೆ ಎನ್ನಲಾಗಿದ್ದು, ಅಧಿಕಾರ ಹಂಚಿಕೆ ವಿಚಾರ ಚರ್ಚೆ ಮಧ್ಯೆಯೇ ಈ ಸಭೆ ಮಹತ್ವ ಪಡೆದಿದೆ.
ಖಾಸಗಿ ಹೋಟೆಲ್‌ನಲ್ಲಿ ಸಭೆ
ಸಚಿವರಾದ ಪರಮೇಶ್ವರ್, ಮುನಿಯಪ್ಪ, ಮಹದೇವಪ್ಪ, ಶಿವರಾಜ ತಂಗಡಗಿ, ಮಾಜಿ ಸಚಿವ ಕೆ.ಎನ್.ರಾಜಣ್ಣ ಸೇರಿ 20ಕ್ಕೂ ಹೆಚ್ಚು ಎಸ್‌ಸಿ, ಎಸ್‌ಟಿ ಶಾಸಕರು ಹಾಗೂ ಪರಿಷತ್ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ಬಳಕೆ ಕುರಿತು ಸಭೆ ಹೆಸರಲ್ಲಿ ಕಾಂಗ್ರೆಸ್‌ನ ಎಸ್‌ಸಿ, ಎಸ್ಟಿ ಸಚಿವರು, ಶಾಸಕರು ಒಗ್ಗಟ್ಟಿನ ಶಕ್ತಿ ಪ್ರದರ್ಶನ ಮಾಡಿದ್ದು, ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ಬೇರೆ ಯೋಜನೆಗಳಿಗೆ ಬಳಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಜೆಟ್ ನಲ್ಲಿ SC, ST ಸಮುದಾಯಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. SCSP-TSP ಹಣ ಯಾವುದಕ್ಕೆ ಮೀಸಲಿದೆಯೋ ಅದಕ್ಕೇ ಬಳಸಬೇಕು. ಈ ಬಗ್ಗೆ ಸಿದ್ದರಾಮಯ್ಯ ಭೇಟಿಯಾಗುವ ಬಗ್ಗೆಯೂ ಸಭೆಯಲ್ಲಿ ಚರ್ಚೆ, ದಲಿತ ಸಿಎಂ ಬೇಡಿಕೆ ಕುರಿತಾಗಿ ಸಮುದಾಯದಿಂದ ಹೈಕಮಾಂಡ್ ಮುಂದೆ ಹಕ್ಕು ಮಂಡನೆಯೂ ಸಿಎಂ ಆಗಿರುವ ಬಗ್ಗೆ ಈ ವೇಳೆ ನಡೆದಿದೆ.
ಇದನ್ನೂ ಓದಿ: ಎಸ್ಸಿಎಸ್ ಪಿ-ಟಿಎಸ್ ಪಿಯ 9 ಸಾವಿರ ಕೋಟಿ ರೂ. ಹಣ ಗ್ಯಾರಂಟಿಗೆ ಬಳಸಿಕೊಂಡ ಸರ್ಕಾರ
SCSP, TSP ಹಣ ನೀಡದ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ರೋಷಾವೇಶ ಪ್ರದರ್ಶಿಸಿದ್ದರು. ಎಸ್ಸಿಎಸ್ಪಿ, ಟಿಎಸ್ಪಿಗೆ ಅನುದಾನ ಹಂಚಿಕೆ ಮಾಡಿರುವುದು ಯಾಕೆ? ಅಂದುಕೊಂಡಿದ್ದೀರಾ? SCSP, TSP ಹಣ ಬೇರೆ ಕಡೆ ಬಳಸುತ್ತಿದ್ದೀರಾ? ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಏರುಧ್ವನಿಯಲ್ಲಿ ಸಚಿವರು ಪ್ರಶ್ನಿಸಿದ್ದು, ಮಹದೇವಪ್ಪ ಅವರ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿ ಆದ ಪ್ರಸಂಗ ನಡೆದಿತ್ತು. ಆ ಬೆನ್ನಲ್ಲಿಯೇ ಈಗ ಸಮುದಾಯದ ನಾಯಕರ ಸಭೆ ನಡೆದಿರೋದು ಭಾರೀ ಕುತೂಹಲ ಮೂಡಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 10:30 am, ಬುಧವಾರ, 4 ಫೆಬ್ರವರಿ 26