ವಿರೋಧದ ನಡುವೆ BMRCL ಬೋರ್ಡ್‌ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಎಷ್ಟು?
ಬೆಂಗಳೂರು, ಫೆಬ್ರುವರಿ 04: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮಂಡಳಿ ಸಭೆಯಲ್ಲಿ ಶೇ 5ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಆದರೆ ಈ ದರ ಏರಿಕೆ ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಅಗತ್ಯವಾಗಿದೆ, ಅದಕ್ಕಾಗಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಸರ್ಕಾರದ ಒಪ್ಪಿಗೆ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ.
ಕಳೆದ ವರ್ಷ ಫೆಬ್ರವರಿ 9 ರಂದು ಮೆಟ್ರೋ ಟಿಕೆಟ್ ದರವನ್ನು ಶೇ101.5ರಷ್ಟು ಹೆಚ್ಚಿಸಲಾಗಿದೆ. ಇದಕ್ಕೆ ಪ್ರಯಾಣಿಕರ ತೀವ್ರ ವಿರೋಧ ವ್ಯಕ್ತವಾಗಿದ್ದು ಕೇವಲ ಮೂರು ದಿನಗಳಲ್ಲೇ ಶೇ.71.5ಕ್ಕೆ ಇಳಿಕೆಯಾಗಿದೆ. ಆ ಘಟನೆ ಇನ್ನೂ ಪ್ರಯಾಣಿಕರ ಮನಸ್ಸಿಂದ ಆಗುವ ಮೊದಲೇ ಮತ್ತೆ ದರ ಏರಿಕೆಯ ಚರ್ಚೆ ಆರಂಭವಾಗಿರುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಇದೀಗ ಶೇ 5ರಷ್ಟು ಏರಿಕೆಗೆ ಬಿಎಂಆರ್‌ಸಿಎಲ್ ಸಭೆಯಲ್ಲಿ ಒಪ್ಪಿಗೆ ದೊರೆತಿದೆ, ಸರ್ಕಾರದ ಅಂತಿಮ ನಿರ್ಧಾರಕ್ಕಾಗಿ ಕಾಯಲಾಗುತ್ತಿದೆ. ಪ್ರಯಾಣಿಕರ ವಿರೋಧದ ನಡುವೆಯೂ ದರ ಏರಿಕೆಗೆ ನಿಗಮ ಪಟ್ಟು ಹಿಡಿದಿದೆ ಎನ್ನಲಾಗುತ್ತಿದೆ.
ದರ ವಿರೋಧಿಸಿದ್ದ ಸಂಸದ ತೇಜಸ್ವಿ ಸೂರ್ಯ
ಕಳೆದ ಫೆಬ್ರವರಿ 9 ರಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಒನ್ ಟು ಡಬಲ್ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಗೊಂದಲದ ನಡುವೆ ವಾರ್ಷಿಕ ಸ್ವಯಂಚಾಲಿತ ದರ ಏರಿಕೆಯಾಗಲು ಬಿಎಂಆರ್‌ಸಿಎಲ್ ಅಣಿಯನ್ನು ಸಂಸದ ತೇಜಸ್ವಿ ಸೂರ್ಯ ವಿರೋಧಿಸಿದ್ದರು. ಬೆಂಗಳೂರು ಮಹಾನಗರ ಪಾಲಿಕೆ ದರ ನಿಗದಿ ಸಮಿತಿಯನ್ನು ಪುನರ್ ರಚಿಸಬೇಕು ಹಾಗೂ ಅಧಿಕಾರಿಗಳು ತಪ್ಪು ಲೆಕ್ಕ ಸರಿಪಡಿಸುವವರೆಗೆ ವಾರ್ಷಿಕ ದರ ಏರಿಕೆಯನ್ನು ತಡೆಹಿಡಿಯಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪತ್ರವನ್ನೂ ಬರೆದಿದ್ದಾರೆ.
ಇದನ್ನೂ ಓದಿ ನಮ್ಮ ಮೆಟ್ರೋ: ಮತ್ತೆ ಮೆಟ್ರೋ ದರ ಎಷ್ಟು ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ
ನಿಗಮದ ಈ ನಿರ್ಧಾರದ ಕುರಿತು ಪ್ರಯಾಣಿಕರೂ ಆಕ್ರೋಶ ವ್ಯಕ್ತಪಡಿಸಿದರು. ಈ ವರ್ಷ ದರ ಏರಿಕೆ ತಪ್ಪಿನಿಂದ ಮುಂದಿನ ವರ್ಷಗಳಲ್ಲಿ ಪ್ರಯಾಣಿಕರಿಗೆ ಹೆಚ್ಚುವರಿ ಹೊರೆ ಆಗಲಿದೆ. ಮೊದಲು ತಪ್ಪು ಲೆಕ್ಕ ಕೊಟ್ಟು ಪ್ರತಿ ಮಾಡಿರುವ ದರವನ್ನು ಇಳಿಸಲಿ, ನಂತರ ವರ್ಷಕ್ಕೆ 5% ರಷ್ಟು ಏರಿಕೆ ಮಾಡಲಿ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದರು. ಆದರೆ ಈ ಎಲ್ಲಾ ವಿರೋಧದ ನಡುವೆಯೂ ಮೆಟ್ರೋ ದರ ಏರಿಕೆಗೆ ನಿಗಮ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.