Pariksha Pe Charcha ಫ್ರೆಬ್ರವರಿ 6ಕ್ಕೆ ‘ಪರೀಕ್ಷಾ ಪೇ ಚರ್ಚಾ’: ವಿದ್ಯಾರ್ಥಿನಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ | Pariksha Pe Charcha On Feb 6 Pm Modi To Interact With Students On Exams

ಪ್ರಧಾನಿ ನರೇಂದ್ರ ಮೋದಿಯವರ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದ 9ನೇ ಆವೃತ್ತಿ ಫೆಬ್ರವರಿ 6 ರಂದು ನಡೆಯಲಿದೆ. ಪರೀಕ್ಷಾ ಭಯ ಹೋಗಲಾಡಿಸಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಪ್ರಧಾನಿ ಸಂವಾದ ನಡೆಸಲಿದ್ದಾರೆ. ಈ ಬಾರಿ ದಾಖಲೆಯ 4.5 ಕೋಟಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ದೆಹಲಿ (ಫೆ.4): ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳಿಗಾಗಿ ಪ್ರತಿ ವರ್ಷ ನಡೆಸಿಕೊಡುವ ಜನಪ್ರಿಯ ಕಾರ್ಯಕ್ರಮ ‘ಪರೀಕ್ಷಾ ಪೇ ಚರ್ಚಾ’ ದ 9ನೇ ಆವೃತ್ತಿಯು ಈ ಬಾರಿ ಫೆಬ್ರವರಿ 6ರಂದು ಪ್ರಸಾರವಾಗಲಿದೆ. ಮುಂಬರುವ ಪರೀಕ್ಷೆಗಳನ್ನು ಎದುರಿಸಲು ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಲು ಮತ್ತು ಪರೀಕ್ಷಾ ಭಯವನ್ನು ಹೋಗಲಾಡಿಸಲು ಪ್ರಧಾನಿಯವರು ಈ ಸಂವಾದ ನಡೆಸಲಿದ್ದಾರೆ.

ಯುವ ಮನಸ್ಸುಗಳೊಂದಿಗೆ ಪ್ರಧಾನಿ ಆಪ್ತ ಸಮಾಲೋಚನೆ

ಈ ಕುರಿತು ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘ಎಕ್ಸ್’ (X) ಮೂಲಕ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿಯವರು, ಕಾರ್ಯಕ್ರಮ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ. ‘ನನ್ನ ಯುವ ಸ್ನೇಹಿತರೊಂದಿಗೆ ಸಂವಹನ ನಡೆಸುವುದು ಯಾವಾಗಲೂ ಅತ್ಯಂತ ಉಲ್ಲಾಸಕರ ಅನುಭವ. ಒತ್ತಡ ರಹಿತವಾಗಿ ಪರೀಕ್ಷೆ ಎದುರಿಸುವ ಬಗ್ಗೆ ಚರ್ಚಿಸಲು ನಾನು ಕಾಯುತ್ತಿದ್ದೇನೆ’ ಎಂದು ಅವರು ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ.

ದಾಖಲೆ ಬರೆದ ನೋಂದಣಿ ಪ್ರಕ್ರಿಯೆ

ಈ ವರ್ಷದ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಕಂಡಿದ್ದು, ದಾಖಲೆ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಆಸಕ್ತಿ ತೋರಿಸಿದ್ದಾರೆ. ಈ ಬಾರಿ ಬರೋಬ್ಬರಿ 4.5 ಕೋಟಿ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಅಲ್ಲದೆ, ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳಲ್ಲಿ 2.26 ಕೋಟಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಒಟ್ಟಾರೆ 6.76 ಕೋಟಿ ಮಂದಿ ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.

Source link

Leave a Reply

Your email address will not be published. Required fields are marked *