ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್ಚಿತ್ರದ ಕ್ರೆಡಿಟ್ ಮೂಲ: ಗೂಗಲ್
ಬೆಳಗಾವಿ, ಫೆಬ್ರುವರಿ 04: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಜನ ಆರೋಪಿಗಳಿಗೆ ಐದು ವರ್ಷಗಳ ಕಠಿಣ ಶಿಕ್ಷೆಯನ್ನು ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ. ಈ ಕುರಿತು ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 2 ಸೆಕ್ಷನ್ಗಳ ಅಡಿಯಲ್ಲಿ ಆರೋಪವಾಗಿದ್ದರೆ, ಒಂದೇ ಸೆಕ್ಷನ್ಗೆ ಒಂದೊಂದು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಆರೋಪಿಗಳಾದ ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ ನಾಯಿಕ, ಪಾರ್ವತಿ ನಾಯಕ, ಯಲ್ಲವ್ವ ನಾಯಿಕ, ಲಕ್ಕಪ್ಪ ನಾಯಿಕ, ಗಂಗವ್ವ ನಾಯಿಕ, ಸಂಗೀತಾ ಹೆಗ್ಗನಾಯಕ, ಸಂತೋಷ ನಾಯಿಕ, ಶೋಭಾ ನಾಯಿಕ, ಲಕ್ಕವ್ವ ನಾಯಿಕ ಹಾಗೂ ಶಿವಪ್ಪ ಅವರಿಗೆ ಶಿಕ್ಷೆ ವಿಧಿಸಲಾಗಿದೆ. ತೀರ್ಪು ಪ್ರಕಟವಾಗುತ್ತಿದ್ದಂತೆ ಅವರ ಕುಟುಂಬದಲ್ಲಿಯೇ ಆರೋಪಿಗಳು ಹಾಗೂ ಅವರ ಕುಟುಂಬದವರು ಕಣ್ಣೀರು ಹಾಕಿದರು.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.