Headlines

ಕ್ವಾರ್ಟರ್ ಫೈನಲ್​ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ

ಕ್ವಾರ್ಟರ್ ಫೈನಲ್​ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ


ಪ್ರಸ್ತುತ ನಡೆಯುತ್ತಿರುವ ರಣಜಿ ಪಂದ್ಯದ ಕ್ವಾರ್ಟರ್ ಫೈನಲ್ ಪಂದ್ಯಕ್ಕಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. 15 ಮಂದಿ ಈ ತಂಡವನ್ನು ದೇವದತ್ತ ಪಡಿಕಲ್ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಟೀಮ್ ಇಂಡಿಯಾ ಆಟಗಾರರಾದ ಕೆಎಲ್ ರಾಹುಲ್ ಹಾಗೂ ಪ್ರಸಿದ್ಧ್ ಕೃಷ್ಣ ಕಾಣಿಸಿಕೊಂಡಿದ್ದಾರೆ.

ಕಳೆದ ಪಂದ್ಯದ ವೇಳೆ ಹೊರಗುಳಿದಿದ್ದ ಅನುಭವಿ ದಾಂಡಿಗ ಕರುಣ್ ನಾಯರ್ ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದರೊಂದಿಗೆ ಮಯಾಂಕ್ ಅಗರ್ವಾಲ್ ಕೂಡ ತಂಡಲ್ಲಿದ್ದಾರೆ. ಆದರೆ ಮಂದಿರಜ್ಜು ಗಾಯದಿಂದ ಬಳಲುತ್ತಿರುವ ವೇಗಿ ವೈಶಾಕ್ ವಿಜಯಕುಮಾರ್ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಇನ್ನು ಕ್ವಾರ್ಟರ್ ಫೈನಲ್ ಪಂದ್ಯದಲ್ಲೂ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇನಿಂಗ್ಸ್ ಆರಂಭವಾಗಲಿದೆ, ಮೂರನೇ ಕ್ರಮಾಂಕದಲ್ಲಿ ಕರುಣ್ ನಾಯರ್ ಕಣಕ್ಕಿಳಿಯಲಿದ್ದಾರೆ. ಜೊತೆಗೆ ನಾಲ್ಕನೇ ಕ್ರಮಾಂಕದಲ್ಲಿ ದೇವದತ್ ಪಡಿಕಲ್ ಬ್ಯಾಟ್ ಬೀಸಲಿದ್ದಾರೆ.

ಐದನೇ ಕ್ರಮಾಂಕದಲ್ಲಿ ಸ್ಮರಣ್ ರವಿಚಂದ್ರನ್ ಕಣಕ್ಕಿಳಿಯಲಿದ್ದು, ಆರನೇ ಕ್ರಮಾಂಕದಲ್ಲಿ ಶ್ರೇಯಸ್ ಗೋಪಾಲ್ ಕಾಣಿಸಿಕೊಂಡಿದ್ದಾರೆ. ವಿವ್ ಕೀಪರ್ ಬ್ಯಾಟರ್ ಆಗಿ ಕೃತಿಕ್ ಕೃಷ್ಣ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. ಇನ್ನು ಬೌಲರ್‌ಗಳಾಗಿ ಪ್ರಸಿದ್ಧ್ ಕೃಷ್ಣ, ಮೊಹ್ಸಿನ್ ಖಾನ್, ಶಿಖರ್ ಶೆಟ್ಟಿ ಹಾಗೂ ವಿದ್ಯಾಧರ್ ಪಾಟೀಲ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಕರ್ನಾಟಕ ತಂಡ: ದೇವದತ್ ಪಡಿಕ್ಕಲ್ (ನಾಯಕ), ಮಯಾಂಕ್ ಅಗರ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಕೆವಿ ಅನೀಶ್, ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ಕೃತಿಕ್ ಕೃಷ್ಣ, ಎಂ. ವೆಂಕಟೇಶ್, ವಿದ್ಯಾಧರ್ ಪಾಟೀಲ್, ವಿದ್ವತ್ ಕಾವೇರಪ್ಪ, ಪ್ರಸಿದ್ಧ್ ಕೃಷ್ಣ, ಮೊಹ್ಸಿನ್ ಖಾನ್, ಶಿಖರ್ ಶೆಟ್ಟಿ, ಕೆಎಲ್ ಶ್ರೀಜಿತ್.

ಕ್ವಾರ್ಟರ್ ಫೈನಲ್ ಎದುರಾಳಿ ಯಾರು?

ಪಂಜಾಬ್ ವಿರುದ್ಧ ನಿರ್ಣಾಯಕ ಆಟಗಾರ 5 ತಂಡಗಳ ಜಯ ಸಾಧಿಸಿರುವ ಕರ್ನಾಟಕವು ಕ್ವಾರ್ ಫೈನಲ್‌ಗೆ ಅರ್ಹತೆ ಪಡೆದಿದೆ. ಅದರಂತೆ ಫೆಬ್ರವರಿ 6 ರಂದು ನಡೆಯಲಿರುವ ನಾಲ್ಕನೇ ಕ್ವಾರ್ಟರ್ ಫೈನಲ್ ಕರ್ನಾಟಕ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಲಿವೆ.

ಶಾರ್ದೂಲ್ ಠಾಕೂರ್ ಮುಂದಾಳತ್ವದ ಮುಂಬೈ ತಂಡದಲ್ಲೂ ಸ್ಟಾರ್ ಬ್ಯಾಟರ್‌ಗಳ ದಂಡೇ ಇದೆ. ಅದರಲ್ಲೂ ಟೆಸ್ಟ್ ಸ್ಪೆಷಲಿಸ್ಟ್‌ಗಳಿಂದಲೇ ಗುರುತಿಸಿಕೊಂಡಿರುವ ಸರ್ಫರಾಝ್ ಖಾನ್, ಯಶಸ್ವಿ ಜೈಸ್ವಾಲ್, ದಾಂಡಿಗರು ಅರ್ಹತಾ ಕ್ವಾರ್ಟರ್ ಫೈನಲ್ ಆಟಗಾರ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇದನ್ನೂ ಓದಿ: IPL 2026: ಐಪಿಎಲ್‌ಗೆ SRH ತಂಡದ ಸ್ಟಾರ್ ಆಟಗಾರ ಡೌಟ್

ಮುಂಬೈ ತಂಡ: ಶಾರ್ದೂಲ್ ಠಾಕೂರ್ (ನಾಯಕ), ಯಶಸ್ವಿ ಜೈಸ್ವಾಲ್, ಮುಶೀರ್ ಖಾನ್, ಅಖಿಲ್ ಹೆರ್ವಾಡ್ಕರ್, ಸಿದ್ದೇಶ್ ಲಾಡ್, ಸರ್ಫರಾಝ್ ಖಾನ್, ಆಕಾಶ್ ಆನಂದ್ (ವಿಕೆಟ್ ಕೀಪರ್), ಹಾರ್ದಿಕ್ ತಮೋರ್ (ವಿಕೆಟ್ ಕೀಪರ್), ಸಾಯಿರಾಜ್ ಪಾಟೀಲ್, ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ತುಷಾರ್ ದೇಶಪಾಂಡೆ, ಮೋಹಿತ್ ಅವಾಂದ್. ಸೂರ್ಯಾಂಶ್ ಶೆಡ್ಗೆ, ದಿವ್ಯೇಶ್ ಸಕ್ಸೇನಾ.



Source link

Leave a Reply

Your email address will not be published. Required fields are marked *