ಬಿಎಂಟಿಸಿ ಬಸ್ ಬಳಿಕ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್

ಬಿಎಂಟಿಸಿ ಬಸ್ ಬಳಿಕ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್


ಬೆಂಗಳೂರು, (ಫೆಬ್ರವರಿ 04): ಬಿಎಂಟಿಸಿ (BMTC) ಬಸ್‌ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಯುಪಿಐ ಸ್ಕ್ಯಾನರ್‌ಗಳನ್ನು ಹಾಕಲಾಗಿದೆ. ಆದಾಗ್ಯೂ, ಕೆಲ ಕಂಡಕ್ಟರ್‌ಗಳು ಬಿಎಂಟಿಸಿ ಬಸ್‌ನಲ್ಲಿರುವ ಯುಪಿಐ ಸ್ಕ್ಯಾನರ್‌ಗಳು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್‌ಗಳನ್ನು (ಯುಪಿಐ ಸ್ಕ್ಯಾನರ್) ನೀಡಿ, ತಮ್ಮ ಬ್ಯಾಂಕ್ ಅಕೌಂಟ್‌ಗೆ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಂಡಿರುವುದು ಬೆಳಕಿಗೆ ಬಂದಿದೆ, ಈ ಸಂಬಂಧ ಕೆಲವು ಕಂಡಕ್ಟರ್‌ಗಳು ಅಮಾನತುಗೊಂಡಿವೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ (ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ) ಸರದಿ. ಹೌದು…ಆಸ್ಪತ್ರೆಯ ಕೆಲ ಸಿಬ್ಬಂದಿ UPI ಮೂಲಕ 23 ಲಕ್ಷ ರೂಪಾಯಿ ದೋಚಿರುವುದು ಬೆಳಕಿಗೆ ಬಂದಿದೆ.

ರೋಗಿಗಳ ಅನುಕೂಲಕ್ಕಾಗಿ ಯುಪಿಐ ಸ್ಕ್ಯಾನ್‌ಗೆ ಅವಕಾಶ ನೀಡಲಾಗಿದೆ. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಆಸ್ಪತ್ರೆ ಸಿಬ್ಬಂದಿ ವೈಯಕ್ತಿಕ ಕ್ಯೂಆರ್ ಸ್ಕ್ಯಾನರ್ ಅಳವಡಿಕೆ ಮಾಡಿ ತಮ್ಮ ಖಾತೆಗೆ ಸಿಬ್ಬಂದಿ ಹಣ ಹಾಕಿಸಿಕೊಂಡಿದ್ದಾರೆ. ಲ್ಯಾಬ್, OPD, ಎಕ್ಸ್‌ರೇ ವೈಯಕ್ತಿಕ QR ಸ್ಕ್ಯಾನರ್ ಅಳವಡಿಕೆ ಮಾಡಿಕೊಂಡು 23 ಲಕ್ಷಕ್ಕೂ ಅಧಿಕ ಹಣ ಲೂಟಿ ಮಾಡಲಾಗಿದೆ. ಬಳಿಕ ಯುಪಿಐ ಐ ಸ್ಕ್ಯಾನರ್ ವಿಚಾರದಲ್ಲಿ ಅನುಮಾನ ಬಂದ ಅಧೀಕ್ಷಕ ದೀಪಕ್ ಅವರು ಸಮಿತಿ ತನಿಖೆ ನಡೆಸಿದಾಗ ಸಿಬ್ಬಂದಿ ಕಳ್ಳಾಟ ಬಯಲಿಗೆ ಬಂದಿದ್ದು, ಎಲ್ಲಾ ದಾಖಲಾತಿಗಳನ್ನು ಸಂಗ್ರಹಿಸಿ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಹೆಚ್ಚಿನ ಯುಪಿಐ ಸ್ಕ್ಯಾನರ್ ನೀಡಿ ಹಣ ಜೇಬಿಗಿಳಿಸ್ತಾರೆ ಬಿಎಂಟಿಸಿ ಕೆಲ ಕಂಡಕ್ಟರ್‌ಗಳು! ನಿಗಮಕ್ಕೆ ರೂ. ನಷ್ಟ



Source link

Leave a Reply

Your email address will not be published. Required fields are marked *