ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಸರ್ವೀಸ್ ಸೆಂಟರ್, 1 ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಕಾರುಗಳು ಭಸ್ಮ

ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಸರ್ವೀಸ್ ಸೆಂಟರ್, 1 ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಕಾರುಗಳು ಭಸ್ಮ


ವಿಜಯಪುರ, ಫೆಬ್ರವರಿ 5: ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹೆಚ್ಎಂಕೆ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ, ಸುಮಾರು 20ಕ್ಕೂ ಹೆಚ್ಚು ಕಾರುಗಳು ಸುತ್ತು ಭಸ್ಮವಾಗಿದೆ. ಹನಮಂತ ಕನಮಡಿ ಅವರಿಗೆ ಸೇರಿದ ಈ ಸರ್ವೀಸ್ ಸೆಂಟರ್‌ನಲ್ಲಿ ರಿಪೇರಿ ಮತ್ತು ಸರ್ವಿಸ್‌ಗಾಗಿ ನಿಲ್ಲಿಸಲಾಗಿದ್ದ ವಿವಿಧ ಕಂಪನಿಗಳ ಕಾರುಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುತ್ತು ಕರಕ, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಕಾರಿನ ಬಿಡಿಭಾಗಗಳು ಕೂಡ ಬೆಂಕಿಗೆ ಆಹುತಿಯಾಗಿವೆ. ಸುತ್ತುಹೋದ ಕಾರುಗಳ ಒಟ್ಟು ಮೌಲ್ಯ ಒಂದು ಕೋಟಿ ರೂಪಾಯಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಅದೃಷ್ಟವಶಾತ್, ಘಟನೆಯ ಸಮಯದಲ್ಲಿ ಸರ್ವೀಸ್ ಸೆಂಟರ್‌ನಲ್ಲಿ ಯಾರೂ ಇಲ್ಲದ ಕಾರಣ ಸಾವು-ನೋವು ಸಂಭವಿಸಿಲ್ಲ. ಸ್ಥಳಕ್ಕೆ ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಸುತ್ತಮುತ್ತ ವ್ಯಾಪಿಸದಂತೆ ಹರಸಾಹಸ ಪಟ್ಟು ನಿಯಂತ್ರಣಕ್ಕೆ ತಂದರು. ಘಟನಾ ಸ್ಥಳಕ್ಕೆ ಗೋಲಗುಂಬಜ್ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *