ಸಿದ್ದರಾಮಯ್ಯ Vs ಡಿ.ಕೆ. ಶಿವಕುಮಾರ್​​: ಎಐಸಿಸಿ ನಾಯಕರ ಮೌನದ ಬಗ್ಗೆ ‘ಕೈ ‘ ಶಾಸಕರಲ್ಲೇ ಬೇಸರ!

ಸಿದ್ದರಾಮಯ್ಯ Vs ಡಿ.ಕೆ. ಶಿವಕುಮಾರ್​​: ಎಐಸಿಸಿ ನಾಯಕರ ಮೌನದ ಬಗ್ಗೆ ‘ಕೈ ‘ ಶಾಸಕರಲ್ಲೇ ಬೇಸರ!


ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಗೊಂದಲಚಿತ್ರದ ಕ್ರೆಡಿಟ್ ಮೂಲ: ಗೂಗಲ್

ಬೆಂಗಳೂರು, ಫೆಬ್ರವರಿ 05: ರಾಜ್ಯ ಕಾಂಗ್ರೆಸ್ನಲ್ಲಿ ಕಳೆದ ಕೆಲ ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಭುಗಲೇಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮೌನದ ಬಗ್ಗೆ ಕಾಂಗ್ರೆಸ್ ಶಾಸಕರು ಹೊರಹಾಕಿದ್ದಾರೆ, ನಾಯಕತ್ವ ಬದಲಾವಣೆ ಗೊಂದಲದಿಂದ ನಮ್ಮ ಸ್ಥಿತಿ ಅಡಕತ್ತರಿಯಲ್ಲಿ ಸಿಲುಕಿ ಬೇಸರ ಎಂದು ಅಲವತ್ತುಕೊಳ್ಳುತ್ತಿದ್ದಾರೆ. ಜೊತೆಗೆ ಕೆಲವೇ ತಿಂಗಳುಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರಲಿದೆ. ಹೀಗಿದ್ದರೂ ನಾಯಕತ್ವ ಬದಲಾವಣೆಯ ವಿಷಯವನ್ನು ಹೈಕಮಾಂಡ್ ಪ್ರಾಮಾಣಿಕಪಡಿಸಿದ ಕಾರಣ ಯಾರನ್ನು ನಂಬಿ ಚುನಾವಣೆ ಎದುರಿಸಬೇಕು ಎಂಬುದೇ ಕಾಂಗ್ರೆಸಿಗರ ಗೊಂದಲಕ್ಕೆ ಕಾರಣವಾಯಿತು.

ಒಬ್ಬರ ಬಳಿ ಹೋದ್ರೆ ಮತ್ತೊಬ್ಬರಿಗೆ ಸಿಟ್ಟು

ಸಿಎಂ ಸಿದ್ದರಾಮಯ್ಯ ಬಳಿ ಅನುದಾನ ಕೇಳಲೆಂದು ತೆರಳಿದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಬೇಸರವಾಗುತ್ತೆ. ಇತ್ತ ಡಿಸಿಎಂ ಮನೆಗೆ ತೆರಳಿದರೆ ಸಿಎಂಗೆ ಸಿಟ್ಟು ಬರುತ್ತೆ. ಹೀಗಿರುವಾಗ ನಾವು ಏನು ಮಾಡೋದು ಎಂದು ಅಧಿವೇಶನ ನಡೆಯುವ ಸಂದರ್ಭದಲ್ಲಿ ಶಾಸಕರು ಪರಸ್ಪರ ಬೇಸರ ಹಂಚಿಕೊಂಡಿದ್ದಾರೆ. ಜೊತೆಗೆ ಹಲವು ಬಾರಿ ಹಿರಿಯ ನಾಯಕರೇ ವಿಷಯ ಪ್ರಸ್ತಾಪಿಸಿದರೂ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೌನಕ್ಕೆ ಶರಣಾಗಿದ್ದಾರೆ. ಐಸಿಸಿ ನಾಯಕರ ಈ ಮೌನದಿಂದಲೇ ಗೊಂದಲ ಉಂಟಾಗಿರುವ ಸಾಧ್ಯತೆಯಿದೆ ಎಂದು ಕೆಲ ಶಾಸಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ, ಜೆಡಿಎಸ್ ಟಿಕೆಟ್ ಫೈಟ್! ನಿಖಿಲ್ ವಿರುದ್ಧ ಕೇಸರಿ ಪಡೆ ಬಹಿರಂಗ ವಾಗ್ದಾಳಿ

ಸ್ಥಳೀಯ ಸಂಸ್ಥೆಯ ಚುನಾವಣೆಯ ಮೇಲೆ ಪರಿಣಾಮ ಬೀರುವ ಆತಂಕ

ನಾಯಕತ್ವ ವಿಚಾರವಾಗಿ ಏನೇ ತೀರ್ಮಾನವಿದ್ದರೂ ಕರೆದು ಮಾತುಕತೆ ನಡೆಸುವುದು ಸೂಕ್ತ. ಗೊಂದಲ ಹೀಗೇ ಮುಂದುವರಿದರೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಆಗಬಹುದು. ಹೀಗಾಗಿ ಎಲ್ಲ ಸಚಿವರೂ ಮೌನ ಮುರಿಯುವಂತೆ ಕಾಂಗ್ರೆಸ್ ಶಾಸಕರು ವೀಕ್ಷಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಡೆದ ಶಾಸಕರ ಸಭೆಯಲ್ಲೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ಖರ್ಗೆ ಮತ್ತು ವೇಣುಗೋಪಾಲ್ ಅವರ ಮೌನದ ಸ್ವಪಕ್ಷದ ಶಾಸಕರೇ ಬೇಸರ ವ್ಯಕ್ತಪಡಿಸಿದ್ದಾರೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬರುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 11:48 am, ಗುರುವಾರ, 5 ಫೆಬ್ರವರಿ 26



Source link

Leave a Reply

Your email address will not be published. Required fields are marked *