Headlines

ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ


ಬೆಂಗಳೂರು, ಫೆಬ್ರವರಿ 05: ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರವು ವಿಶೇಷ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಬಾಂಗ್ಲಾದೇಶ ಮತ್ತು ಇತರ ದೇಶಗಳಿಂದ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸುವುದು ಈ ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿದೆ. ಸೂಚನೆಯ ನಂತರ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಅನಧಿಕೃತವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿಗರು ಮತ್ತು ವಿದೇಶಿಯರನ್ನು ಹುಡುಕಲು ನಿರ್ದೇಶನ ನೀಡಲಾಗುವುದು. ಈ ಹಿಂದೆ, ಸುಮಾರು 370 ಜನರನ್ನು ಗಡಿಪಾರು ಎಂದು ಸದನದಲ್ಲಿ ಉತ್ತರ ನೀಡಿದ್ದನ್ನೂ ಈ ವೇಳೆ ಅವರು ಉಲ್ಲೇಖಿಸಿದ್ದಾರೆ. ಎಫ್‌ಆರ್‌ಒ (ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ) ದಾಖಲೆಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಅನಧಿಕೃತ ವಲಸಿಗರು ಕಾಣಸಿಗುವುದಿಲ್ಲ, ಸರ್ಕಾರವು ಈ ವಿಶೇಷ ಡ್ರೈವ್ ಮೂಲಕ ಅವರನ್ನು ಹುಡುಕಲು ಮುಂದಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *