ಬೆಂಗಳೂರು, ಫೆಬ್ರವರಿ 5: ಬೆಂಗಳೂರಿನ ಇಬ್ಬಲೂರು ಜಂಕ್ಷನ್ ವಾಹನ ಸವಾರರಿಗೆ ನಿತ್ಯ ತಲೆನೋವಾಗಿ ಪರಿಣಮಿಸಿದೆ. ಬೆಳ್ಳಂದೂರು, ಸರ್ಜಾಪುರ, ಎಚ್‌ಎಸ್‌ಎಸ್‌ಆರ್ ಲೇಔಟ್ ಮತ್ತು ಕಾಡುಬೀಸನಹಳ್ಳಿಯ ಪ್ರದೇಶಗಳಿಂದ ಬರುವ ವಾಹನಗಳು ಜಂಕ್ಷನ್ ಮೂಲಕ ಹಾದು ಹೋಗುವುದರಿಂದ ಇಲ್ಲಿ ನಿರಂತರವಾಗಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಕಂಡುಬರುತ್ತದೆ. ಪ್ರಸ್ತುತ ಮೇಲ್ಸೇತುವೆ ಕಿರಿದಾಗಿದ್ದರೆ, ವಾಹನಗಳ ದಟ್ಟಣೆಯನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆ ಕೈಗೆತ್ತಿಕೊಂಡಿದೆ. ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು ಇತ್ತೀಚೆಗೆ ಸ್ಥಳ ಪರಿಶೀಲನೆ ನಡೆಸಿ, ಪೂರ್ವ ಮತ್ತು ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು ಹಾಗೂ ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಈ ವೇಳೆ, ಪ್ರಸ್ತುತ ಮೇಲ್ಸೇತುವೆಯ ಸಾಮರ್ಥ್ಯವನ್ನು ಕಡಿಮೆ ಹೆಚ್ಚುವರಿ ಮೇಲ್ಸೇತುವೆ ನಿರ್ಮಿಸಲು ಅಥವಾ ಈಗಿರುವ ಮೇಲ್ಸೇತುವೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಯೋಜನೆಗೆ ಸಂಬಂಧಿಸಿದ ಯೋಜನೆ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ.
ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ