Headlines

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ


ಉಡುಪಿ, (ಫೆಬ್ರವರಿ 05): ಓಮನ್‌ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್ ಅಬುದಾಭಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ 49 ಕೋಟಿ ರೂಪಾಯಿ (20 ಮಿಲಿಯನ್ ದಿರಂ) ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು…ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಂತನು ಜ.20 ರಂದು ದೊಡ್ಡ ಟಿಕೆಟ್‌ನಲ್ಲಿ 305810 ಸಂಖ್ಯೆಯ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಾಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು. ಇದರಿಂದ ಅರ್ಧ ಹಣ ಅಂದರೆ ಸರಿ ಸುಮಾರು 24.5 ಕೋಟಿ ರೂ. ಹಣ ಅವರ ಗೆಳೆಯನಿಗೆ ಸಿಗಲಿದೆ. ಇನ್ನು ಮಟ್ಟು ಪರಿಸರದಲ್ಲಿರುವ ಶಾಂತನು ಕುಟುಂಬಸ್ಥರು ಫುಲ್ ಖುಷ್ ಆಗಿದ್ದಾರೆ. ಈ ಕುರಿತು ಶಾಂತನು ಪೋಷಕರ ಜೊತೆ ನಮ್ಮ ಉಡುಪಿ ಪ್ರತಿನಿಧಿ ಪ್ರಜ್ವಲ್ ನಡೆಸಿರುವ ಮಾತುಕತೆ ಇಲ್ಲಿದೆ ನೋಡಿ.

ಇದನ್ನೂ ಓದಿ: ವಿದೇಶದಲ್ಲಿ ಕನ್ನಡಿಗನ ಕಮಾಲ್: ಭರ್ಜರಿ 49 ಕೋಟಿ ರೂ. ಲಾಟ್ರಿ ಗೆದ್ದ ಉಡುಪಿಯ ಯುವಕ!



Source link

Leave a Reply

Your email address will not be published. Required fields are marked *