Headlines

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ಕೇಂದ್ರ ಸಚಿವರ ಭೇಟಿ ಬಳಿಕ ತೇಜಸ್ವಿ ಸೂರ್ಯ ಹೇಳಿದ್ದಿಷ್ಟು

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ಕೇಂದ್ರ ಸಚಿವರ ಭೇಟಿ ಬಳಿಕ ತೇಜಸ್ವಿ ಸೂರ್ಯ ಹೇಳಿದ್ದಿಷ್ಟು


ಬೆಂಗಳೂರು, ಫೆಬ್ರವರಿ 05: ಏಕಾಏಕಿ ಮೆಟ್ರೋ ಟಿಕೆಟ್‌ ದರ ಹೆಚ್ಚಿಸಿ ಬಿಎಂಆರ್‌ಸಿಎಲ್‌ ಆದೇಶ ಹೊರಡಿಸಿದೆ. ಸೋಮವಾರದಿಂದ ದುಬಾರಿ ಸವಾರಿಗೆ ಸಜ್ಜಾಗಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ಮಾಡಿದ್ದಾರೆ. ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ, ಕೇವಲ 10 ತಿಂಗಳ ಹಿಂದೆಯೇ ಮೆಟ್ರೋ ದರವನ್ನು ಶೇ. 71ರಷ್ಟು ಹೆಚ್ಚಿಸಲಾಗಿದೆ. ಈ ಕಾರಣದಿಂದ ಬೆಂಗಳೂರು ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಎಂಬ ಕುಖ್ಯಾತಿಗೆ ಒಳಗಾಗಿದೆ. ಜನರ ಹಣ ಲೂಟಿ ಮಾಡಲು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *