ನೆಲಮಂಗಲ, ಫೆಬ್ರವರಿ 6: ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾರೀ ಅನಾಹುತ ಸಂಭವಿಸಿದ ಖಾಸಗಿ ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ಗೆ ಸೇರಿದ ಬಸ್ ನೆಲಮಂಗಲ ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ. ರಸ್ತೆ ಕಾಮಗಾರಿ ಹಿನ್ನೆಲೆ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ. ಬಸ್‌ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರು ಇದ್ದಾರೆ. ಬೆಂಕಿ ಕಾಣುವಂತೆ ಚಾಲಕ ಹಾಗೂ ಪ್ರಯಾಣಿಕರು ತಕ್ಷಣ ಬಸ್‌ನಿಂದ ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಕಿಯ ತೀವ್ರತೆ ಹೆಚ್ಚಾಗಿ ಬಸ್ ಸಂಪೂರ್ಣ ಸುಟ್ಟು ನಾಶವಾಗಿದೆ. ಸ್ಥಳಕ್ಕೆ ತಕ್ಷಣ ಆಗಮಿಸಿದ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅವಘಡ ತಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ