ಚೆಕ್ ಬೌನ್ಸ್ ಪ್ರಕರಣಕ್ಕೆ ಬಾಲಿವುಡ್ ಹಾಸ್ಯ ನಟ ರಾಜ್ಪಾಲ್ ಯಾದವ್ (ರಾಜ್‌ಪಾಲ್ ಯಾದವ್) ರಿಲೀಫ್ ನೀಡಲು ದೆಹಲಿಗೆ ನಿರಾಕರಿಸಿತ್ತು. ಈ ಕಾರಣದಿಂದ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಗುರುವಾರ (ಜನವರಿ 5) ನಾಲ್ಕು ಗಂಟೆಗೆ ಅವರು ಜೈಲಿಗೆ ಆಗಮಿಸಿದರು. ಅಧಿಕಾರಿಗಳು ಆ ಬಳಿಕ ತಮ್ಮ ಪ್ರಕ್ರಿಯೆ. ಅವರನ್ನು ಈಗ ಜೈಲಿನಲ್ಲಿ ಇಡಲಾಗಿದೆ.
ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ರಾಜ್ಪಾಲ್ ವಿರುದ್ಧ ಕೇಸ್ ದಾಖಲಿಸಿತ್ತು. ನಟ ಹಾಗೂ ಆತನ ಪತ್ನಿ ಕೊಟ್ಟ ಚೆಕ್ ಬೌನ್ಸ್ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 2018ರಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್ ಪಾಲ್ ಯಾದವ್ ಹಾಗೂ ಆತನ ಪತ್ನಿ ಅಪರಾಧಿ ಎಂದು ಘೋಷಣೆ ಮಾಡಿತ್ತು. 2019ರಲ್ಲಿ ಸೆಷನ್ ಕೋರ್ಟ್ ಈ ಆದೇಶವನ್ನು ಎತ್ತಿ ಹಿಡಿಯಿತು.
2019ರಲ್ಲಿ ಈ ಪ್ರಕರಣವನ್ನು ದೆಹಲಿ ಕೋರ್ಟ್ ಅಲ್ಲಿ ರಾಜ್ಪಾಲ್ ಯಾದವ್ ಪ್ರಶ್ನೆ ಮಾಡಿದರು. ಸೆಟಲ್‌ಮೆಂಟ್‌ಗೆ ದಾರಿ ಹುಡುಕಿದೆ ಎಂದು ಹೇಳಿದ ಕಾರಣದಿಂದ 2024 ರಲ್ಲಿ ನಟನಿಗೆ ತಾತ್ಕಾಲಿಕ ರಿಲೀಫ್ ನೀಡಿತ್ತು. ಆದರೆ, ಈವರೆಗೆ ನಟ ಹಣವನ್ನು ಹಿಂದಿರುಗಿಸಿಲ್ಲ. ಹೀಗಾಗಿ, ಕೋರ್ಟ್ ಈ ಬಗ್ಗೆ ಆದೇಶ ಹೊರಡಿಸಿದೆ. ಹೆಚ್ಚುವರಿಯಾಗಿ ಕೆಲ ವಾರ ಅವಕಾಶ ಕೊಟ್ಟರೆ ಹಣ ಹೊಂದಿಸಲು ಪ್ರಯತ್ನಿಸುವಾಗ ರಾಜ್‌ಪಾಲ್ ಪರ ವಕೀಲರು ಹೇಳಿದ್ದಾರೆ. ಆದರೆ, ಇದಕ್ಕೆ ನಿರಾಕರಿಸಿತ್ತು. ಬುಧವಾರ ನಾಲ್ಕು ಗಂಟೆ ಒಳಗೆ ಸರಂಡರ್ ಆಗಲು ಕೋರ್ಟ್ ಸೂಚನೆ ನೀಡಿತ್ತು.
ಇದನ್ನೂ ಓದಿ: ಪತ್ರಕರ್ತನ ಮೊಬೈಲ್ ಕಿತ್ತುಕೊಂಡು ಎಸೆದ ಹಾಸ್ಯ ನಟ ರಾಜ್ಪಾಲ್ ಯಾದವ್
‘ಯಾವುದೇ ವ್ಯಕ್ತಿ ನಿರ್ದಿಷ್ಟ ಹಿನ್ನೆಲೆ ಅಥವಾ ಉದ್ಯಮಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ಈ ನ್ಯಾಯಾಲಯವು ಅವರಿಗೆ ವಿಶೇಷ ಅವಕಾಶವನ್ನು ನೀಡುತ್ತದೆ ಎಂದು ನಿರೀಕ್ಷಿಸಬೇಡಿ. ಯಾವಾಗಲೂ ಅದೇ ತಪ್ಪು ಆಗಿದ್ದರೆ ಅದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯ ಹೇಳಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.