ಕಾಲಿವುಡ್​​ನಲ್ಲಿ ಡ್ರಗ್ಸ್ ಘಮಲು: ನಟಿ ಸೇರಿ ಎಂಟು ಮಂದಿ ಬಂಧನ

ಕಾಲಿವುಡ್​​ನಲ್ಲಿ ಡ್ರಗ್ಸ್ ಘಮಲು: ನಟಿ ಸೇರಿ ಎಂಟು ಮಂದಿ ಬಂಧನ


ಚಿತ್ರರಂಗ (ಚಲನಚಿತ್ರ ಉದ್ಯಮ) ಹಾಗೂ ಡ್ರಗ್ಸ್ ಆಪ್ತ ನಂಟು. ಆಗೊಮ್ಮೆ ಈಗೊಮ್ಮೆ ಚಿತ್ರರಂಗಕ್ಕೆ ಸೇರಿದ ಮಂದಿ ಡ್ರಗ್ಸ್ ಪ್ರಕರಣದಲ್ಲಿ ಬಂಧನ, ವಿಚಾರಣೆ ಎದುರಿಸುತ್ತಲೇ ಇರುತ್ತಾರೆ. ಸ್ಯಾಂಡಲ್ವುಡ್, ಟಾಲಿವುಡ್, ಕಾಲಿವುಡ್, ಬಾಲಿವುಡ್, ಮಾಲಿವುಡ್ ಯಾವುದೂ ಸಹ ಡ್ರಗ್ಸ್ ಪ್ರಕರಣಕ್ಕೆ ಹೊರತಲ್ಲ. ಇದೀಗ ತಮಿಳು ಚಿತ್ರರಂಗದಲ್ಲಿ ಡ್ರಗ್ಸ್ ಪ್ರಕರಣ ಕೇಳಿ ಬಂದಿದ್ದು, ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯ ಡ್ರಗ್ಸ್ ಸಮೇತ ಪೊಲೀಸರು ಬಂಧಿಸಿದ್ದಾರೆ.

ನಟಿ ಅಂಜು ಕೃಷ್ಣ ಮತ್ತು ಕೆಲವು ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ವಿನ್ಸಿ ನಿವೇತಾ ಅವರನ್ನು ತಮಿಳುನಾಡು ಪೊಲೀಸ್ ಇಲಾಖೆಯ ಮಾದಕ ವಸ್ತು ನಿಯಂತ್ರಣ ವಿಭಾಗದ ತಂಡ ಬಂಧಿಸಿದೆ. ಬಂಧಿತರಿಂದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾನಿ ಚೆಲ್ಲಪ್ಪನ ಹೆಸರಿನ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ನಡೆದ ಆಪರೇಷನ್ ನಟಿ ಸೇರಿದಂತೆ ಇತರರ ಬಂಧನವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಲಸರವಕ್ಕಂ ಎಂಬಲ್ಲಿ 33 ವರ್ಷದ ವಿಘ್ನೇಶ್ವರನ್ ಎಂಬಾತನನ್ನು ಬಂಧಿಸಿದ್ದರು. ಆತನ ವಿಚಾರಣೆ ವೇಳೆ ಆತ ವೆಂಕಟೇಶ್ ಹೆಸರಿನ ವ್ಯಕ್ತಿಯಿಂದ ಮಾದಕ ವಸ್ತುಗಳ ಖರೀದಿ ಮಾಡಿರುವ ಅಂಶ ತಿಳಿದು ಬಂದಿದೆ. ಬಳಿಕ ವೆಂಕಟೇಶ್ ಎಂಬಾತನನ್ನು ಪೊಲೀಸರು ಗ್ರಾಹಕನ ರೀತಿ ಸಂಪರ್ಕ ಮಾಡಿ, ಡ್ರಗ್ಸ್ ಮಾರುವಂತೆ ಹೇಳಿ, ನಿಗದಿತ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಆ ವ್ಯಕ್ತಿ ಬಂದಾಗ ಆತನನ್ನು ಬಂಧಿಸಿ, ಆತನಿಂದ ಆರು ಗ್ರಾಂ ಮೆಥಾಫೆಟಮೈನ್, ಏಳು ಗ್ರಾಂ ಓಜಿ ಗಾಂಜಾ, ಹದಿನೈದು ಗ್ರಾಂಜಾ, ಸ್ಮೋಕಿಂಗ್ ಬಾಂಗ್, ಸ್ಟ್ಯಾಂಪ್ ಮತ್ತು ಒಂಬತ್ತು ಮೊಬೈಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು ಚಿತ್ರೋತ್ಸವದ ಕೊನೆಯ ದಿನ ಈ 10 ಸಿನಿಮಾ ಮಿಸ್ ಮಾಡಿಕೊಳ್ಳಬೇಡಿ

ಈ ವೇಳೆ, ನಟಿ ಅಂಜು ಕೃಷ್ಣ ಮತ್ತು ಸಹಾಯಕ ನಿರ್ದೇಶಕಿ ವಿನ್ಸಿ ನಿವೇತಾ ಅವರನ್ನು ಬಂಧಿಸಲಾಗಿದೆ. ಅಂಜು ಕೃಷ್ಣ ತಮಿಳಿನ ‘ವೆಲ್ಲಿಮಲೈ’ ಮಲಯಾಳಂನ ‘ಆರೊ’, ‘ಆಕಾಶಂ ಕದನ್’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಎಲ್ಲ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *