ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರ ಇನ್ಟ್ಸಾ ಡಿಲೀಟ್, ಮೊಬೈಲ್ ಸ್ವಿಚ್ ಆಫ್!
ಕಾರವಾರ, ಫೆಬ್ರುವರಿ 06: ರೀಲ್ಸ್ ರಾಣಿ ಸುಚಿತ್ರಾ ಮತ್ತು ಜ್ಯೋತಿಷಿ ಪ್ರೇಮ (ಕಮಲಾಕರ್ ಭಟ್ ಮತ್ತು ಸುಚಿತ್ರಾ ಪ್ರಕರಣ) ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರು ತನಿಖೆಯ ವೇಳೆ ಮೊಬೈಲ್ ಫೋನ್ ಪರಿಶೀಲನೆ ನಡೆಸಿದಾಗ, ಕಲಬುರಗಿ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ಯುವಕರೊಂದಿಗೆ ಆಕೆ ನಿರಂತರ ಸಂಪರ್ಕದಲ್ಲಿದ್ದ ವಿಚಾರ ಬೆಳಕಿಗೆ ಬಂದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಆತಂಕಗೊಂಡ ಯುವಕರು ತಮ್ಮ ಇನ್ಸ್ಟಾಗ್ರಾಮ್ ಖಾತೆಗಳನ್ನು ಡಿಲೀಟ್ ಮಾಡಿದ್ದು, ಇನ್ನೂ ಕೆಲವರು ತಮ್ಮ ಮೊಬೈಲ್ ಗಳನ್ನೇ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.
ಸುಚಿತ್ರಾ ಪತಿ ಹೇಳಿಕೆಗೆ ಹುಡುಗರು ಕಂಗಾಲು
ಇತ್ತ ಶಿವಮೊಗ್ಗದಲ್ಲಿ ಸುಚಿತ್ರಾಳ ಪತಿ ಹಾಗೂ ಮಗಳು ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆಗಳು ಯುವಕರನ್ನು ಇನ್ನಷ್ಟು ದಂಗು ಮಾಡುತ್ತವೆ. ಸುಚಿತ್ರಾಳ ಮೊಬೈಲ್ ಚೆಕ್ ಮಾಡಿದ್ರೆ ಇವಳ ಬಗ್ಗೆ ಅಸಹ್ಯ ಆಗುತ್ತೆ. ಬೇರೆ ಬೇರೆ ಹುಡುಗರ ಜೊತೆ ಇವಳು ನಿತ್ಯದಲ್ಲಿ ಇದ್ದಳು ಎಂದು ಆಕೆಯ ಪತಿ ಹೇಳಿಕೆಯನ್ನು ನೋಡಿದ ಬೆನ್ನಲ್ಲೇ ಕೆಲವರು ತಮ್ಮ ಇನ್ಸ್ಟಾಗ್ರಾಮ್ ಖಾತೆಗಳನ್ನು ಡಿಲಿಟ್ ಮಾಡಿಕೊಂಡಿದ್ದಾರೆ, ಇನ್ನೂ ಕೆಲವರು ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ತಮ್ಮ ಹೆಸರು ತನಿಖೆಯಲ್ಲಿ ಹೊರಬೀಳಬಹುದೆಂಬ ಆತಂಕದಲ್ಲಿ ಯುವಕರು ಸಿಲುಕಿದ್ದಾರೆ.
ಸುಚಿತ್ರಾ ಹಲವು ಯುವಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದಳು, ತನ್ನ ಮೇಲೆ ಹಲ್ಲೆ ನಡೆಸಲು ಯುವಕರ ಸಹಾಯ ಕೇಳಿದ್ದಾಳೆ ಎಂದು ಆಕೆಯ ಪತಿ ಆರೋಪ ಹೊರೆಸಿದ್ದಾನೆ . ಈ ಕುರಿತು ಒಂದೊಂದಾಗಿ ತನಿಖೆ ಮುಂದುವರಿಸುತ್ತಿದೆ, ಸುಚಿತ್ರ ಪ್ರಕರಣದ ಹಲವಾರು ಪ್ರಶ್ನೆಗಳು ಸುಳಿಯಲ್ಲಿ ಸಿಲುಕಿವೆ.
ಇದನ್ನೂ ಓದಿ ‘ಅವಳಿಗಾಗಿ ನಾಯಿ ತರ ಅಲೆದಾಡಿದ್ದೆ’: ಕಮಲಾಕರನ ಒಂದೊಂದೇ ರಂಗಿನಾಟ ಬಯಲು!
ಸಿದ್ದಾಪುರ ಪೊಲೀಸ್ ಠಾಣೆಯ ಇಬ್ಬರು ಅಧಿಕಾರಿಗಳ ವರ್ಗ
ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ವಿಫಲರಾಗಿದ್ದಾರೆ ಎಂಬ ಸ್ಥಳೀಯರ ಆರೋಪಗಳು, ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಎಸ್‌ಐ ಗಣಪತಿ ಭಟ್ ಹಾಗೂ ಹೆಡ್ ಕಾನ್‌ಟೇಬಲ್ ಚಂದ್ರಶೇಖರ್ ಅವರನ್ನು ಹಳಿಯಾಳ ಉಪವಿಭಾಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್, ಸಿದ್ದಾಪುರ ಪೊಲೀಸ್ ಠಾಣೆಯ ಕಾರ್ಯವೈಖರಿ ಕುರಿತು ತನಿಖೆಗೆ ಆದೇಶ ನೀಡಲಾಗಿದೆ. ಶಿರಸಿ ಉಪವಿಭಾಗದ ಡಿವೈಎಸ್‌ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ, ತನಿಖೆಯಲ್ಲಿ ಯಾವುದೇ ಲೋಪ ಕಂಡುಬಂದರೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಪಿ ದೀಪನ್ ಆಯೋಜಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.