ಮೈಸೂರು, ಫೆಬ್ರವರಿ 6: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷಗಳ ಪೂರ್ಣಾವಧಿ ನಡೆಯಲಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಅವರು ಮಾತನಾಡಿದರು, ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿರುವಾಗ, ರಾಜಕೀಯ ವಲಯದಲ್ಲಿ ಈ ಬಗ್ಗೆ ಗೊಂದಲವಿಲ್ಲ. ಹೈಕಮಾಂಡ್ ಕಡೆಯಿಂದ ಸ್ಪಷ್ಟ ಸೂಚನೆ ದೊರೆತಿದೆ, ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿದರು.
ಯಾರೋ ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದರು. ಆದರೆ, ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಹೀಗಾಗಿ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ಮುನ್ನಡೆಸಲಿದ್ದಾರೆ ಎಂದು ಯತೀಂದ್ರ ಹೇಳಿದರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ