ಶಿವಮೊಗ್ಗ, (ಫೆಬ್ರವರಿ 06): ಬೆಂಗಳೂರು ನಮ್ಮ ಮೆಟ್ರೊ (ಬೆಂಗಳೂರು ನಮ್ಮ ಮೆಟ್ರೋ) ಪ್ರಯಾಣ ದರ ಏರಿಕೆ ಬೆನ್ನಲ್ಲೇ ಬಿಎಂಆರ್ಸಿಎಲ್ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆಯಾಗಿದೆ ಎಂದು ಬಿಜೆಪಿ(ಬಿಜೆಪಿ) ನಾಯಕರು ಆರೋಪಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ಎಲ್ಲಾ ಏರಿಕೆಯಾಗುತ್ತಿರುವುದು ಕೇಂದ್ರ ಸರ್ಕಾರ ಎಂದು ತಿರುಗೇಟು ನೀಡುತ್ತಿದ್ದಾರೆ. ಹೀಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ವಿರುದ್ಧ ಆರೋಪ ಪ್ರತ್ಯಾರೋಪ ಜೋರಾಗಿದ್ದರೆ, ಇದರ ಮಧ್ಯೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಹ ರಾಜ್ಯ ಸರ್ಕಾರದ ವಿರುದ್ಧವೇ ಆರೋಪ ಮಾಡಿದ್ದಾರೆ. ಇನ್ನು ಒಂದು ವೇಳೆ ಕೇಂದ್ರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಸಿದ್ದರೆ 24 ಗಂಟೆಯೊಳಗೆ ಕಡಿಮೆ ಮಾಡಿಸುತ್ತೇನೆ ಎಂದು ತೇಜಸ್ವಿ ಸೂರ್ಯ ಭರವಸೆ ನೀಡಿದ್ದಾರೆ.