Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 7ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 7ರ ದಿನಭವಿಷ್ಯ


ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡುತ್ತದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮ ತಿಳಿವಳಿಕೆ- ಅನುಭವ- ಜ್ಞಾನಕ್ಕೆ ಹಾಗೂ ಅದರ ಸರಿಯಾದ ಬಳಕೆಗೆ ಉತ್ತಮವಾದ ಪ್ರತಿಫಲ ದೊರೆಯಲಿದೆ. ವ್ಯಾಪಾರದ ವಿಸ್ತರಣೆಯ ವಿಚಾರಕ್ಕೆ ನೀವು ಕೈಗೊಳ್ಳುವ ಪ್ರಯಾಣವು ಲಾಭದಾಯಕ ಆಗಲಿದೆ. ಅಧಿಕ ಖರ್ಚು ಮಾಡುವ ಪ್ರವೃತ್ತಿಯನ್ನು ನಿಯಂತ್ರಿಸುವುದು ಮುಖ್ಯ. ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚುತ್ತದೆ. ಗುರು ಸಮಾನರಾದ ವ್ಯಕ್ತಿಗಳನ್ನು ಈ ದಿನ ಭೇಟಿಯಾಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಯಾವುದೇ ವ್ಯಕ್ತಿ ಅಥವಾ ವಿಷಯವನ್ನು ತುಂಬಿಸಿಕೊಳ್ಳಬೇಡಿ. ಕುಟುಂಬದೊಂದಿಗೆ ಸಮಯ ಕಳೆಯುವುದರಿಂದ ನೆಮ್ಮದಿ ಸಿಗುತ್ತದೆ. ಸಣ್ಣ ವಿಷಯಗಳನ್ನು ಅತಿಯಾಗಿ ಚಿಂತಿಸುವುದನ್ನು ತಪ್ಪಿಸುವುದಕ್ಕಾಗಿ ನಿಮಗೆ ಬರುವಂಥ ಆಲೋಚನೆಗಳನ್ನು ಬರೆದಿಡುವ ಅಭ್ಯಾಸ ಮಾಡಿ. ಇದನ್ನು ಈ ದಿನದ ಮಟ್ಟಿಗೆ ಮಾಡಿದರೂ ಸಾಕು. ಶಿಕ್ಷಣ, ಬ್ಯಾಂಕಿಂಗ್ ಅಥವಾ ಕನ್ಸಲ್ಟಿಂಗ್ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಣೆಯಲ್ಲಿ ಯಶಸ್ಸು ಸಿಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಕ್ರಿಯೇಟಿವ್ ಮತ್ತು ಕಲೆಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಇಂದು ಉತ್ತಮ ದಿನ. ಭಾವನಾತ್ಮಕ ನಿರ್ಧಾರಗಳಿಂದ ಸಾಧ್ಯವಾದಷ್ಟು ದೂರವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡಬಹುದು. ದೊಡ್ಡ ಮೊತ್ತದ ಹೂಡಿಕೆ ಮಾಡುವ ಮುನ್ನ ಯಾವುದೇ ಸಲಹೆ ತೆಗೆದುಕೊಳ್ಳಬೇಕು ಎಂಬುದು ಗಮನದಲ್ಲಿರಲಿ. ನಿಮ್ಮ ಭಾವನೆಗಳಿಗೆ ಸಣ್ಣ ಸಣ್ಣ ಸಂಗತಿಗಳು ಸಹ ಘಾಸಿ ಮಾಡಬಹುದು.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *