ಹಾಸನ, ಫೆಬ್ರವರಿ 08: ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸ್ ಸಿಬ್ಬಂದಿ ಗರಂ ಆಗಿ ರೇಗಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಪತಿ ಮನೆಯವರ ಕಿರುಕುಳ ಎಂದು ಅರ್ಪಿತಾ ಎಂಬಾಕೆ ಸಹಾಯವಾಣಿ 112ಕ್ಕೆ ಕರೆ ಮಾಡಿದರು. ಸ್ಥಳಕ್ಕೆ ಬಂದು ಮಹಿಳೆ ಸಮಸ್ಯೆ ಆಲಿಸಿ ದೂರು ನೀಡಲು ಸಿಬ್ಬಂದಿ ತಿಳಿಸಿದ್ದರೂ ಪದೇ ಪದೇ ಕರೆ ಮಾಡಿದ್ದಕ್ಕೆ ಮಹಿಳೆ ಮೇಲೆ ಪೊಲೀಸ್ ಅಧಿಕಾರಿ ರೇಗಾಡಿದ್ದಾರೆ. ಅರಕಲಗೂಡು ಪೊಲೀಸ್ ಠಾಣಾ ವಿಷಯ ನಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.