ವರ್ಗಾವಣೆಯಾದ ಐಪಿಎಸ್ ಅಧಿಕಾರಿ ವರ್ಟಿಕಾ ವಿರುದ್ಧ ಬೆದರಿಕೆ ಆರೋಪ!
ಬಳ್ಳಾರಿ, ಫೆಬ್ರವರಿ 08: ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಬ್ಯಾನರ್ ಗಲಭೆ (ಬ್ಯಾನರ್ ಘರ್ಷಣೆ) ಪ್ರಕರಣದ ಬಳಿಕ ಡಿಐಜಿಪಿ ಹುದ್ದೆಯಿಂದ ವರ್ಗಾವಣೆಗೊಂಡಿರುವ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ಇದೀಗ ಗಂಭೀರ ಆರೋಪಗಳು ಕೇಳಿಬಂದಿವೆ. ವರ್ಗಾವಣೆ ಆದ ನಂತರವೂ ಕಡತಗಳ ವಿಚಾರದಲ್ಲಿ ಕೆಳ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಸಂಚಲನ ಮೂಡಿಸಿದೆ.
ನೂತನ ಅಧಿಕಾರಿಗೆ ಕಡತ ನೀಡಬೇಡಿ ಎಂದ ಅಧಿಕಾರಿ
ಬಳ್ಳಾರಿ ವಲಯ ಆಡಳಿತಾಧಿಕಾರಿಗೆ ವಾಟ್ಸಾಪ್ ಕರೆ ಮೂಲಕ ಮಾತನಾಡಿದ ವರ್ತಿಕಾ ಕಟಿಯಾರ್, ಹೊಸದಾಗಿ ಆಗಮಿಸಿರುವ ಅಧಿಕಾರಿಗೆ ಯಾವುದೇ ಪ್ರಮುಖ ದಾಖಲೆಗಳನ್ನು ಹಸ್ತಾಂತರಿಸದಂತೆ ಸೂಚನೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ ತಮ್ಮ ವರ್ಗಾವಣೆ ವಿಚಾರ ಕೇಂದ್ರ ಆಡಳಿತಾತ್ಮಕ ಮಂಡಳಿ (CAT) ಯಲ್ಲಿದೆ ಎಂದು ಹೇಳಿರುವ ವರ್ತಿಕಾ ಕಟಿಯಾರ್, ಕಡತಗಳನ್ನು ನೀಡಿದರೆ CAT ನಲ್ಲಿ ಪ್ರತಿವಾದಿಯಾಗಿ ಸೇರಿಸಲು ಎಂದು ವಿಚಾರಣೆಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಲಯ ಆಡಳಿತಾಧಿಕಾರಿ ಮಾಡಿರುವ ಕರೆಗಳ ವಿಡಿಯೋ ಹಾಗೂ ದಾಖಲೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ವೈರಲ್ ವೀಡಿಯೋ ಇಲ್ಲಿದೆ ನೋಡಿ
ಇದನ್ನೂ ಓದಿ ಬಳ್ಳಾರಿ ಬ್ಯಾನರ್ ಗಲಾಟೆ: ಡಿಐಜಿಪಿ ವರ್ತಿಕಾ ಕಟಿಯಾರ್ ಎತ್ತಂಗಡಿ; ನೂತನ ಎಸ್ಪಿ ನೇಮಕ
ಮೌಖಿಕ ಸೂಚನೆ ನೀಡದಂತೆ ಆಡಳಿತಾಧಿಕಾರಿ ಪತ್ರ
ಇದಕ್ಕೆ ಪ್ರತಿಕ್ರಿಯೆಯಾಗಿ ಬಳ್ಳಾರಿ ವಲಯ ಆಡಳಿತಾಧಿಕಾರಿ ಬಸವರಾಜ್ ಅವರು ವರ್ತಿಕಾ ಕಟಿಯಾರ್ ಅವರಿಗೆ ಅಧಿಕೃತ ಪತ್ರ ಬರೆದಿದ್ದಾರೆ, ನಿಮ್ಮ ನಿರ್ದೇಶನಗಳು ನನ್ನ ಕರ್ತವ್ಯ ನಿರ್ವಹಣೆಗೆ ಅಡ್ಡಿಯಾಗುತ್ತಿವೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಕರೆ, ಪತ್ರ ಅಥವಾ ಮೌಖಿಕ ಸೂಚನೆಗಳನ್ನು ನೀಡದಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ.
ಬಳ್ಳಾರಿ ಗಲಭೆ ಬಳಿಕ ಜನವರಿ 7ರಂದು ಡಿಐಜಿಪಿ ಹುದ್ದೆಯಿಂದ ವರ್ಗಾವಣೆಗೊಂಡಿರುವ ವರ್ತಿಕಾ ಕಟಿಯಾರ್ ತಮ್ಮ ವರ್ಗಾವಣೆಯನ್ನು ಪ್ರಶ್ನಿಸಿ ಸಿಎಟಿಗೆ ಮೇಲ್ಮವಿ ಸಲ್ಲಿಸಿದ್ದರು. ಆದರೆ ವರ್ಗಾವಣೆ ಬಳಿಕವೂ ಆಡಳಿತಾತ್ಮಕ ಕಾರ್ಯಗಳಲ್ಲಿ ತೊಡಗಿದೆ ಎಂಬ ಆರೋಪಗಳು ಇದೀಗ ರಾಜ್ಯದ ಆಡಳಿತ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.