ಪಲ್ಟಿಯಾಗಿರುವ ಬೊಲೆರೊ ಚಿತ್ರ ಕ್ರೆಡಿಟ್ ಮೂಲ: tv9 ಕನ್ನಡ
ಕೋಲಾರ, ಫೆಬ್ರವರಿ 08: ಬೊಲೆರೊ ಪಲ್ಟಿಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಲೋನಿ ಗೇಟ್ ಬಳಿ ನಡೆದಿದೆ. ಆಂಧ್ರದ ಮುನಿಯಮ್ಮ, ವೆಂಕಟಪ್ಪ ಹಾಗೂ ಮತ್ತೊಬ್ಬರು ಕಾಣಿಸಿಕೊಂಡಿದ್ದಾರೆ. ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಹೋಗುವಾಗ ದುರಂತ ಸಂಭವಿಸಿದೆ. ದುರಂತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದರೆ, ಶ್ರೀನಿವಾಸಪುರ ಮತ್ತು ಆಂಧ್ರದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.