ಮೈಸೂರು: ಭಾರಿ ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ 4 ಗೋದಾಮುಗಳು

ಮೈಸೂರು: ಭಾರಿ ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ 4 ಗೋದಾಮುಗಳು


ಮೈಸೂರು, ಫೆಬ್ರವರಿ 9: ಮೈಸೂರು ನಗರದ ಹೊರವಲಯದ ಕೆಸರೆ ಬಡಾವಣೆಯಲ್ಲಿ ಭಾನುವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ ನಾಲ್ಕಕ್ಕೂ ಅಧಿಕ ಗೋದಾಮುಗಳು ಬೆಂಕಿಗಾಹುತಿಯಾಗಿವೆ. ಮೈಸೂರು-ಬೆಂಗಳೂರು ರಸ್ತೆ ಸಮೀಪದಲ್ಲಿರುವ ಈ ಗೋದಾಮುಗಳಲ್ಲಿ ಹಳೆಯ ವಸ್ತುಗಳನ್ನು ಸಂಗ್ರಹಿಸಿಡಲಾಗಿದೆ, ಏಕಾಏಕಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೇ ವ್ಯಾಪಿಸಿದೆ. ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಬಳಿಕ ಹಲವು ಅಗ್ನಿಶಾಮಕ ವಾಹನಗಳಿಗೆ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟವು.

ಅದೃಷ್ಟವಶಾತ್, ಘಟನೆಯಲ್ಲಿ ಸಾವು-ನೋವು ಸಂಭವಿಸಿಲ್ಲ ಎಂದು ಸೂಚಿಸಲಾಗಿದೆ. ಗೋದಾಮುಗಳಲ್ಲಿ ಸಂಗ್ರಹಿಸಿದ್ದ ಹಳೆಯ ವಸ್ತುಗಳು ಮತ್ತು ಸುಲಭವಾಗಿ ಹೊತ್ತಿ ಉರಿಯುವ ಸಾಮಗ್ರಿಗಳು ಇದ್ದ ಕಾರಣ ಬೆಂಕಿ ವೇಗವಾಗಿ ವ್ಯಾಪಿಸಿತು. ಬೆಂಕಿಯಿಂದ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿರುವ ಸಾಧ್ಯತೆಯಿದೆ. ಕುಡಿದ ಮತ್ತಿನಲ್ಲಿ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಘಟನೆಯು ಮೈಸೂರಿನ ಎನ್.ಆರ್. ಪೊಲೀಸ್ ಠಾಣಾ ನಡೆದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *