ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ಚಿತ್ರದ ಕ್ರೆಡಿಟ್ ಮೂಲ: ಗೂಗಲ್
ಬೆಂಗಳೂರು, ಫೆಬ್ರವರಿ 09: 2013–14 ರಿಂದ 2018–19ರ ಅವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ನೀಡಲಾದ ಸಾಲಗಳ ಮೇಲಿನ ಬಡ್ಡಿ ಮನ್ನಾಗೆ ಆನ್‌ಲೈನ್ ಸೆಟ್ಲ್ಮೆಂಟ್ (OTS) ಯೋಜನೆಗೆ ಇತ್ತೀಚೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ವಿಚಾರವೀಗ ವಿವಾದವಾಗಿ ಮಾರ್ಪಟ್ಟಿದೆ. ಈ ಬಗ್ಗೆ ವಿಪಕ್ಷಗಳು ಕಿಡಿ ಕಾರಿದ್ದು, ಅಲ್ಪಸಂಖ್ಯಾತರಿಗೆ ಮಾತ್ರ ಸಾಲದ ಬಡ್ಡಿ ಮನ್ನಾ ಮಾಡಿ ರೈತರು ಮತ್ತು ಹಿಂದುಳಿದ ವರ್ಗಗಳು ಸೇರಿದಂತೆ ಇತರ ಸಮುದಾಯಗಳನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿವೆ. ಸರ್ಕಾರ ತುಷ್ಠೀಕರಣ ರಾಜಕಾರಣ ನಡೆಸುತ್ತಿದೆ ಎಂದೂ ಕಿಡಿ ಕಾರಿವೆ.
714.13 ಕೋಟಿ ಹಣ ಇನ್ನೂ ಬಾಕಿ ಇದೆ
ಈ ಅವಧಿಯಲ್ಲಿನ ಮೂಲ ಸಾಲದ ಮೊತ್ತ 981 ಕೋಟಿ, ಇದರಲ್ಲಿ ಕೇವಲ 98.18 ಕೋಟಿ ಮಾತ್ರ ವಸೂಲು ಮಾಡಲಾಗಿದೆ. ಉಳಿದ 714.13 ಕೋಟಿ ಹಣ ಇನ್ನೂ ಬಾಕಿಯಿದೆ. ಈ ಮೂಲಕ ಪ್ರಸ್ತಾವಿತ ಯೋಜನೆಡಿ KMDC ಯಿಂದ ಸಾಲ ಪಡೆದ 1.94 ಲಕ್ಷ ಫಲಾನುಭವಿಗಳು ಸಂಪೂರ್ಣ ಮನ್ನಾದೊಂದಿಗೆ ಕೇವಲ ಮೂಲಧನವನ್ನು ಮಾತ್ರ ಮರುಪಾವತಿಸಬಹುದು ಎಂದು ಹೇಳಿರೋದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮತ್ತೊಂದೆಡೆ ಲಭ್ಯ ಮಾಹಿತಿಯ ಪ್ರಕಾರ ಹಣಕಾಸು ಇಲಾಖೆ ಈ ಒಟಿಎಸ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ. ಒಂದು ವೇಳೆ ಈ ರೀತಿ ಬಡ್ಡಿ ಮನ್ನಾ ಮಾಡಿದರೆ, ಉಳಿದ ನಿಗಮಗಳಿಂದಲೂ ಇಂತಹ ಬೇಡಿಕೆ ಇರುತ್ತದೆ. ಇದು ಆದಾಯದ ಮೇಲೆ ಪರಿಣಾಮ ಬೀರಬಹುದೆಂದು ಸರ್ಕಾರ ತಿಳಿಸಿದೆ.
ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಸಿಎಂ ಪುತ್ರ ಯತೀಂದ್ರ ದಳ್ಳುರಿ; ತನ್ವೀರ್ ಸೇಠ್ ಕ್ಷೇತ್ರದಲ್ಲೂ ಆರೋಪ, ಆಕ್ಷೇಪ
ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಮತ್ತೊಂದೆಡೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದಿದ್ದು, ಇದೇ ರೀತಿಯ ಸೌಲಭ್ಯವನ್ನು ಸರ್ಕಾರ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ನಿಗಮ ಮತ್ತು ಇತರ ಹಿಂದುಳಿದ ವರ್ಗಗಳ ನಿಗಮಗಳ ಫಲಾನುಭವಿಗಳಿಗೆ ಏಕೆ ನೀಡುತ್ತಿಲ್ಲ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಪ್ರಶ್ನಿಸಿದ್ದಾರೆ. ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಕೂಡ ಈ ಬಗ್ಗೆ ಕಿಡಿ ಕಾರಿದ್ದು, ರಾಜ್ಯ ಸರ್ಕಾರವು ವ್ಯಾಪಕ ಆರ್ಥಿಕತೆಯನ್ನು ಪರಿಹರಿಸುವ ಬದಲು ಮತಬ್ಯಾಂಕ್ ರಾಜಕಾರಣದಲ್ಲೇ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿರ್ಧಾರ ಸಮರ್ಥಿಸಿಕೊಂಡ KMDC
ಆದರೆ KMDC ಮಾತ್ರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿದೆ, ಒಟಿಎಸ್ ಜಾರಿಯಲ್ಲಿ ಕನಿಷ್ಠ 150 ಕೋಟಿ ಹಣ ವಸೂಲಿ ಮಾಡಬಹುದೆಂಬ ವಿಶ್ವಾಸ ವ್ಯಕ್ತಪಡಿಸಿದೆ. ಬಡ್ಡಿಯಾಗಿ ಸುಮಾರು 14 ಕೋಟಿ ರೂ. ಮನ್ನಾ ಮಾಡಿದರೂ, ಸಂಪೂರ್ಣ ಸಾಲ ಬಾಕಿಯ ರೂಪದಲ್ಲಿ ಮೂಲಧನವನ್ನು ವಸೂಲಿ ಮಾಡುವುದು ಉತ್ತಮ ಎಂದು ನಿಗಮ ವಾದಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 12:24 pm, ಸೋಮ, 9 ಫೆಬ್ರವರಿ 26