ಮೈಸೂರು, ಫೆಬ್ರವರಿ 10: ನಂಜನಗೂಡು ತಾಲೂಕು ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್ರಾಮ ದೇವತೆ ಜಾತ್ರೆ ಹಿನ್ನೆಲೆ ಗ್ರಾಮಸ್ಥರು ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಾತ್ರೆಯ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ವಿಡಿಯೋ ಚಿತ್ರೀಕರಣ ಹಾಗೂ ಕುಡಿದು ಗಲಾಟೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ವಿಶೇಷವೆಂದರೆ, ಮಹಿಳೆಯರು ಹಾಗೂ ಯುವತಿಯರ ವಿಡಿಯೋ ತೆಗೆದರೆ ಅಥವಾ ಕುಡಿದು ಗಲಾಟೆ ಮಾಡಿದರೆ 30 ಸಾವಿರ ರೂಪಾಯಿ ದಂಡ ವಿಧಿಸದಿದ್ದರೆ ಡಂಗುರ ಸಾರಿದ್ದಾರೆ.
ಇಂದಿನಿಂದ (ಫೆಬ್ರವರಿ 10) ಮೂರು ದಿನಗಳ ಕಾಲ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿ ಗ್ರಾಮದಲ್ಲಿ ಡಂಗುರ ಬಾರಿಸಿ ಜಾಗೃತಿ ಮೂಡಿಸಲಾಗಿದೆ. ಗ್ರಾಮದ ನಿವಾಸಿ ಜವರ ಎಂಬುವರ ಮೂಲಕ ತಮಟೆ ಬಾರಿಸಿ ಗ್ರಾಮಾದ್ಯಂತ ಈ ನಿಯಮಗಳನ್ನು ಪ್ರಕಟಿಸಲಾಗಿದೆ, ಜಾತ್ರೆ ಶಾಂತಿಯುತವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮಸ್ಥರು ಪ್ರಾರಂಭಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ