ಬೆಂಗಳೂರು, ಫೆಬ್ರವರಿ 10: ಅತಿಹೆಚ್ಚಿನ ಭದ್ರತೆ ಇರುವ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಛೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧದಲ್ಲಿ ಬಂಧಿಸಲಾಗಿದೆ.
ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಸಹಿತ ಕಚೇರಿಯಲ್ಲೇ ಮರೆತು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಗಾಬರಿಗೊಂಡ ನವೀನ್ ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಛೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ವೇಳೆ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ಹೊತ್ತುಕೊಂಡು ಹೋಗಿರುವುದು ಇದೆ.
ತಕ್ಷಣ ಕಾರ್ಯಾಚರಣೆ ನಡೆಸಿದ ವಿಧಾನಸೌಧ ಆರೋಪಿ ಡಿ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ, ಭದ್ರತಾ ವ್ಯವಸ್ಥೆಗಳ ಕುರಿತು ಸಹ ಪ್ರಶ್ನೆಗಳು ಎದ್ದಿವೆ.
ವರದಿ: ವಿಕಾಸ್, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ