Headlines

P Ramaiah Passes Away: ವಿಧಾನ ಪರಿಷತ್ ಮಾಜಿ ಸದಸ್ಯ‌, ಹಿರಿಯ ಪತ್ರಕರ್ತ ಪಿ.ರಾಮಯ್ಯ ನಿಧನ | Today | P Ramaiah Passes Away Tributes Pour In For Veteran Journalist And Ex Mlc

P Ramaiah Passes Away: ವಿಧಾನ ಪರಿಷತ್ ಮಾಜಿ ಸದಸ್ಯ‌, ಹಿರಿಯ ಪತ್ರಕರ್ತ ಪಿ.ರಾಮಯ್ಯ ನಿಧನ | Today | P Ramaiah Passes Away Tributes Pour In For Veteran Journalist And Ex Mlc



P Ramaiah Passes Away: ವಿಧಾನ ಪರಿಷತ್ ಮಾಜಿ ಸದಸ್ಯ‌, ಹಿರಿಯ ಪತ್ರಕರ್ತ ಪಿ.ರಾಮಯ್ಯ ನಿಧನ | Today | P Ramaiah Passes Away Tributes Pour In For Veteran Journalist And Ex Mlc

ಹಿರಿಯ ಪತ್ರಕರ್ತ ಮತ್ತು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93) ಅವರು ನಿಧನರಾಗಿದ್ದಾರೆ. ‘ಹಿಂದೂ ರಾಮಯ್ಯ’ ಎಂದೇ ಖ್ಯಾತರಾಗಿದ್ದ ಇವರು, ‘ಪತ್ರಿಕೋದ್ಯಮದ ತಪಸ್ವಿ’ ಎಂದು ಕರೆಯಲ್ಪಡುತ್ತಿದ್ದರು ಮತ್ತು ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಬೆಂಗಳೂರು (ಫೆ.11): ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ(93) ಅವರು ನಿಧನರಾಗಿದ್ದಾರೆ‌. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ.ರಾಮಯ್ಯ ಅವರು, ಅಂಗಾಂಗ ವೈಫಲ್ಯದಿಂದಾಗಿ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಅಸುನೀಗಿದರು ಎಂದು ಅವರ ಪುತ್ರ ಡಾ.ಬಾಲಾಜಿ ತಿಳಿಸಿದ್ದಾರೆ.

1933ರ ಸೆ.12 ರಂದು ಜನಿಸಿದ ರಾಮಯ್ಯ ಅವರು, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು ಹಾಗೂ ಮೊಮ್ಮಕಳನ್ನು ಅಗಲಿದ್ದಾರೆ . ”ದಿ ಹಿಂದೂ” ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದ ಅವರು, ಹಿಂದೂ ರಾಮಯ್ಯ ಎಂದೇ ಜನಪ್ರಿಯರಾಗಿದ್ದರು. ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು, ಪತ್ರಿಕಾ ಅಕಾಡೆಮಿ ಹಾಗೂ ವಿವಿಧ ಪತ್ರಕರ್ತ ಕಲ್ಯಾಣ ಸಮಿತಿಗಳ ಸದಸ್ಯರಾಗಿದ್ದರು.

ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ. ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು.

ಸತ್ಯ ಮತ್ತು ಪ್ರಾಮಾಣಿಕತೆಗೆ ಬದ್ಧರಾಗಿದ್ದ ಇವರನ್ನು ‘ಪತ್ರಿಕೋದ್ಯಮದ ತಪಸ್ವಿ” ಎಂದು ಕರೆಯಲಾಗುತ್ತದೆ. ಇವರ ಅನುಭವ ಕಥನ ‘ನಾನು ಹಿಂದೂ ರಾಮಯ್ಯ’ ಕೃತಿಯು ಇವರ ಬದ್ಧತೆಯನ್ನು ಎತ್ತಿಹಿಡಿಯುತ್ತದೆ. ಪಿ.ರಾಮಯ್ಯನವರು ತಮ್ಮ ವೃತ್ತಿ ಜೀವನದಲ್ಲಿ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿನ ಸಂಪರ್ಕಗಳನ್ನು ಬಳಸಿ, ಸರ್ಕಾರದ ನೀತಿ ನಿರೂಪಣೆಗೆ ಸಾಕಷ್ಟು ಕೊಡುಗೆ ನೀಡಿದ್ದರು.

ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥೀವ ಶರೀರವನ್ನು ಬುಧವಾರ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರ ಕ್ಲಬ್ ಸಮೀಪದಲ್ಲಿ ವಾಸವಾಗಿದ್ದ ಅವರ ಮನೆಯಲ್ಲಿ ಇಡಲಾಗುವುದು. ಬಳಿಕ, ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.



Source link

Leave a Reply

Your email address will not be published. Required fields are marked *