Headlines

ಪದೇ ಪದೇ ಅದ್ನೇ ಕೇಳ್ಬೇಡಿ, ನಾನು-ಡಿಕೆ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು: ಸಿದ್ದರಾಮಯ್ಯ ಫುಲ್ ಗರಂ

ಪದೇ ಪದೇ ಅದ್ನೇ ಕೇಳ್ಬೇಡಿ, ನಾನು-ಡಿಕೆ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು: ಸಿದ್ದರಾಮಯ್ಯ ಫುಲ್ ಗರಂ


ಬೆಂಗಳೂರು, ಫೆಬ್ರವರಿ 11: ನಾಯಕತ್ವ ಗೊಂದಲದ ಕುರಿತು ಪದೇ ಪದೇ ಕೇಳುತ್ತಿರುವ ಪ್ರಶ್ನೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆ ಕೇಳಿದಾಗ ಸಿಟ್ಟಾದ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ. ಕಳೆದ ಮೂರು ತಿಂಗಳಿನಿಂದ ಪದೇ ಪದೇ ಕೇಳಲಾಗುತ್ತಿದೆ. ದಯವಿಟ್ಟು ಇದನ್ನು ಪುನರಾವೃತ್ತಿ ಮಾಡಬೇಡಿ ಎಂದು ಮುಖ್ಯಮಂತ್ರಿಗಳು ಗರಂ ಆಗಿಯೇ ಹೇಳಿದರು.

ಶಾಸಕರ ವಿದೇಶ ಪ್ರವಾಸದ ವಿಷಯ ಪ್ರಸ್ತಾಪಿಸಿದಾಗ, ತಮ್ಮ ಗಮನಕ್ಕೆ ಬಂದಿಲ್ಲ, ಅದು ವೈಯಕ್ತಿಕ ಖರ್ಚಿನಲ್ಲಿದ್ದರೆ ವಿವಾದ ಏಕೆ ಎಂದು ಪ್ರಶ್ನಿಸಿದರು. ಆದರೆ, ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಯಿಂದ ಅವರು ಸಿಡಿಮಿಡಿಗೊಂಡರು.

‘ನಾನು ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಪಕ್ಷದ ಹೈಕಮಾಂಡ್‌ನ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತಿದ್ದಾರೆಯೋ, ಅದನ್ನು ನಾವು ತಪ್ಪದೆ ಪಾಲಿಸುತ್ತೇವೆ. ಇದು ಸಂಪೂರ್ಣವಾಗಿ ಹೈಕಮಾಂಡ್‌ಗೆ ಬಿಟ್ಟ ವಿಚಾರ’ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *