Headlines

ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರು: ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ ಕರೆ

ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರು: ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ ಕರೆ


ಗುತ್ತಿಗೆದಾರರ ಸಂಘದ ಪೂರ್ವಭಾವಿ ಸಭೆಚಿತ್ರ ಕ್ರೆಡಿಟ್ ಮೂಲ: tv9 ಕನ್ನಡ

ಮಂಡ್ಯ, ಫೆಬ್ರವರಿ 11: ರಾಜ್ಯ ಸರ್ಕಾರ ಬಿಲ್ ಬಾಕಿ ಉಳಿಸಿಕೊಂಡ ವಿಚಾರವಾಗಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಸಮರಕ್ಕೆ ಮುಂದಾಗಿದ್ದಾರೆ. ಸಾವಿರಾರು ಕೋಟಿ ರೂ ಬಾಕಿ ಬಿಲ್ ಬಿಡುಗಡೆ (ಬಾಕಿ ಇರುವ ಬಿಲ್‌ಗಳು) ಮಾಡದ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು, ಮಾರ್ಚ್ 5 ರಂದು ಬೃಹತ್ ಹೋರಾಟಕ್ಕೆ ಕರೆ ನೀಡಿದರು (ಗುತ್ತಿಗೆದಾರರ ಪ್ರತಿಭಟನೆ) ಮಾಹಿತಿ.

ಮಾರ್ಚ್ 5 ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಿದರು.

ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ

ಸಭೆ ಬಳಿಕ ಮಾತನಾಡಿದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್, ಸರ್ಕಾರ ಗುತ್ತಿಗೆದಾರರ 37 ಸಾವಿರ ಕೋಟಿ ರೂ ಬಾಕಿ ಉಳಿಸಿಕೊಂಡಿದೆ. ಮಂಡ್ಯ ಜಿಲ್ಲೆಯಲ್ಲಿ ಗುತ್ತಿಗೆದಾರರ 950 ಕೋಟಿ ರೂ ಹಣ ಬಾಕಿ ಇದೆ. ಹೀಗಾಗಿ ಗುತ್ತಿಗೆದಾರರಿಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಸಣ್ಣಪುಟ್ಟ ಗುತ್ತಿಗೆ ಕೆಲಸ ಮಾಡಿದ್ರೂ ನಮಗೆ ದುಡ್ಡು ಕೊಡುತ್ತಿಲ್ಲ. ಸಾಲಸೋಲ ಮಾಡಿ ಕೆಲಸ ಮಾಡಿದ್ದೇವೆ, ಈಗ ಬಡ್ಡಿ ಕಟ್ಟಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಕಿ ಬಿಲ್ ಮಾಡದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಸ್ಥಗಿತ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ

ಸಮಸ್ಯೆಯನ್ನು ಸರಿಪಡಿಸುವಂತೆ ಮನವಿ ಮಾಡಿದರೆ ಯಾರೂ ಆಲಿಸುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗ ಕಮಿಷನ್ ಹಾವಳಿ. ಈ ಹಿಂದೆ ನಮ್ಮ ಬೆನ್ನಿಗೆ ನಿಂತು ಅವರೇ ಭ್ರಷ್ಟರಾಗಿದ್ದಾರೆ. ನಮ್ಮಿಂದಲೇ ಅಧಿಕಾರಕ್ಕೆ ಬಂದವರು ನಮ್ಮನ್ನೇ ಕಡೆಗಣಿಸಿದ್ದಾರೆ. ಸರ್ಕಾರ ಎಚ್ಚೆತ್ತು ತಕ್ಷಣ ಬಾಕಿ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ನಮಗೆ ಶಕ್ತಿ ತೋರಿಸುತ್ತೇವೆ ಎಂದು ಸರ್ಕಾರಕ್ಕೆ ಆರ್.ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರರಿಗೆ ಯಾಕೆ ಬಿಲ್ ನೀಡುತ್ತಿಲ್ಲ? ಕಾರಣ ಕೊಟ್ಟ ಹಣಕಾಸು ಇಲಾಖೆ ಕಾರ್ಯದರ್ಶಿ

ಈ ವಿಚಾರವಾಗಿ ಇತ್ತೀಚಿನ ರಾಜ್ಯ ಗುತ್ತಿಗೆದಾರರ ಪ್ರತಿನಿಧಿ ಸಂಘವು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು 33 ಸಾವಿರ ಕೋಟಿ ರೂ ಮೊತ್ತದ ಪಾವತಿಗಳು ಇನ್ನೂ ಬಾಕಿ ಉಳಿದಿವೆ ಎಂದು ಗಮನಸೆಳೆದಿದ್ದಾರೆ. ಜೊತೆಗೆ ಈ ಬಾಕಿ ಹಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *