ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಮ್ಮ ಮಗನ ಮದುವೆಯ ವಿಚಾರದಲ್ಲಿ ಬ್ಯುಸಿಯಾಗಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಕುಟುಂಬ ಸಮೇತರಾಗಿ ಹೋಗಿ ಮಗನ ಮದುವೆಗೆ ಆಹ್ವಾನಿಸಿದ್ದ ಲಿಟ್ಲ್ ಮಾಸ್ಟರ್, ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಮದುವೆಗೆ ಆಹ್ವಾನಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ಏಕೈಕ ಪುತ್ರ ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಾಂದೂಕ್ ಮದುವೆ ಮುಂಬರುವ ಮಾರ್ಚ್ 05ರಂದು ನಡೆಯಲಿದೆ. ಮುಂಬೈನಲ್ಲಿ ಅದ್ದೂರಿಯಾಗಿ ನಡೆಯಲಿರುವ ಈ ಮದುವೆಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದೇಶದ ಪ್ರಮುಖ ಗಣ್ಯರು, ತಮ್ಮ ಟೀಮ್ ಮೇಟ್ಸ್ ಮನಗೆ ಕುಟುಂಬ ಸಮೇತರಾಗಿ ಹೋಗಿ ಮಗನ ಮದುವೆಗೆ ಆಹ್ವಾನಿಸುತ್ತಿದ್ದಾರೆ.

ನಿನ್ನೆಯಷ್ಟೇ ಅಂದರೆ ಫೆಬ್ರವರಿ 10ರಂದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿನ್ ತೆಂಡೂಲ್ಕರ್ ಹಾಗೂ ಅವರ ಕುಟುಂಬಸ್ಥರು ಮೋದಿಯವರನ್ನು ಮದುವೆಗೆ ಪಾಲ್ಗೊಳ್ಳುವಂತೆ ಆತ್ಮೀಯವಾಗಿ ಆಹ್ವಾನಿಸಿದ್ದರು. ಈ ವಿಚಾರವನ್ನು ಸ್ವತಃ ತೆಂಡೂಲ್ಕರ್ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದರು.

ಇದಾದ ಬಳಿಕ ಸಚಿನ್ ತೆಂಡೂಲ್ಕರ್ ಕುಟುಂಬ ದೇಶದ ಗೃಹಮಂತ್ರಿ ಅಮಿತ್ ಶಾ ಹಾಗೂ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಭೇಟಿಯಾಗಿ, ಮದುವೆಗೆ ಆಹ್ವಾನಿಸಿದ್ದರು. ಇದಾದ ಬಳಿಕ ಯುವ ಜೋಡಿಗೆ ಸಲಹೆ ಹಾಗೂ ಮಾರ್ಗದರ್ಶನ ಜೊತೆಗೆ ಆಶೀರ್ವದಿಸಿದ ಗಣ್ಯರಿಗೆ ಧನ್ಯವಾದಗಳು ಎಂದು ಸಚಿನ್ ತೆಂಡೂಲ್ಕರ್ ಬರೆದುಕೊಂಡಿದ್ದಾರೆ.

ಇನ್ನು ಭಾರತದ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಮದುವೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದಾರೆ. ನಮ್ಮ ಕುಟುಂಬಕ್ಕೆ ನೀವು ನೀಡಿದ ಆತಿಥ್ಯಕ್ಕೆ ಧನ್ಯವಾದಗಳು ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಬರೆದುಕೊಂಡಿದ್ದಾರೆ.

ಸಾನಿಯಾ ಚಾಂದೋಕ್ ಮುಂಬೈನ ಪ್ರಖ್ಯಾತ ಉದ್ಯಮಿ ರವಿ ಗೈ ಅವರ ಮೊಮ್ಮಗಳಾಗಿದ್ದಾರೆ. ರವಿ ಘೈ ಮುಂಬೈನಲ್ಲಿ ಗ್ರಾವಿಸ್ ಗ್ರೂಪ್ ಎನ್ನುವ ಸಂಸ್ಥೆಯನ್ನು ಹೊಂದಿದ್ದು, ಹಲವಾರು ಐಸ್‌ಕ್ರೀಮ್ ಉತ್ಫನ್ನಗಳನ್ನು ಹಾಗೂ ಹೋಟೆಲ್ ಉದ್ಯಮಗಳನ್ನು ಹೊಂದಿದೆ.

ಕೆಲ ತಿಂಗಳ ಹಿಂದಷ್ಟೇ ನಡೆದ ಐಪಿಎಲ್ ಮಿನಿ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಅರ್ಜುನ್ ತೆಂಡೂಲ್ಕರ್ ಅವರನ್ನು ಲಖನೌ ಸೂಪರ್ ಜೈಂಟ್ಸ್‌ಗೆ ಟ್ರೇಡ್ ಮಾಡಿತ್ತು. ಹೀಗಾಗಿ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಅರ್ಜುನ್ ತೆಂಡೂಲ್ಕರ್ ಲಖನೌ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯಲಿದ್ದಾರೆ.

Source link
ಅರ್ಜುನ್ ತೆಂಡೂಲ್ಕರ್-ಸಾನಿಯಾ ಮದುವೆಗೆ ರಾಹುಲ್ ಗಾಂಧಿ ಆಹ್ವಾನಿಸಿದ ಸಚಿನ್ ಫ್ಯಾಮಿಲಿ!