
INTUC, AITUC, HMS, CITU, AIUTUC, TUCC, SEWA, AICCTU, LPF ಮತ್ತು UTUC ಸೇರಿದಂತೆ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಈ ಮುಷ್ಕರಕ್ಕೆ ನೇತೃತ್ವ ವಹಿಸಿದೆ. ಕೇಂದ್ರ ಸರ್ಕಾರದ ನೀತಿಗಳನ್ನು “ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ” ಎಂದು ಆರೋಪಿಸಿರುವ ಸಂಘಟನೆಗಳು, ಈ ನೀತಿಗಳ ವಿರುದ್ಧ ಜನಸಾಮಾನ್ಯರ ಧ್ವನಿಯನ್ನು ಎತ್ತಲು ಭಾರತ್ ಬಂದ್‌ಗೆ ಕರೆ ನೀಡಿವೆ.