ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಹೆತ್ತ ತಂದೆ-ತಾಯಿಯನ್ನೇ ಕೊಂದ ಮಗ

ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಹೆತ್ತ ತಂದೆ-ತಾಯಿಯನ್ನೇ ಕೊಂದ ಮಗ


ಬೆಂಗಳೂರು, (ಫೆಬ್ರವರಿ 11): ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು (ತಂದೆ ಮತ್ತು ತಾಯಿ) ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (ಬೆಂಗಳೂರು) ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನವೀನ್ ಚಂದ್ರ ಭಟ್(60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ಆಗಿದ್ದಾರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ಕೌಟುಂಬಿಕ ವಿಚಾರಕ್ಕೆ ಪುತ್ರ ರೋಹನ್ ಭಟ್(33) ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದ್ದು, ಸದ್ಯ ಹಂತಕ ರೋಹನ್ ಭಟ್ ಅವರನ್ನು ಹೆಚ್‌ಎಎಲ್‌ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.

ತಂದೆ ಚಂದ್ರ ಭಟ್(60) ಹಾಗೂ ತಾಯಿ ಡಾ.ಶ್ಯಾಮಲಾ ಭಟ್(55) ಜೊತೆ ಪುತ್ರ ರೋಹನ್ ಭಟ್ ಬೆಂಗಳೂರಿನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ಆದರೆ, ಕೌಟುಂಬಿಕ ವಿಚಾರಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದ್ದಾನೆ, ಕೋಪದಲ್ಲಿ ತಂದೆ ತಾಯಿಗೆ ಚಾಕುವಿನಿಂದ ಚುಚ್ಚಿದ್ದಾನೆ. ಬಳಿಕ ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಮೃತ ದಂಪತಿಯ ಪುತ್ರಿ ಅಮೆರಿಕಾದಲ್ಲಿದ್ದು, ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಇಬ್ಬರ ಶವ ಬೌರಿಂಗ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ.

ಆದರೆ, ಕೊಲೆ ಮಾಡುವಷ್ಟು ಏನಾಗಿತ್ತು ಎನ್ನುವುದೇ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್‌ಎಎಲ್‌ ಪೊಲೀಸ್ ಹಂತಕ ಮಗ ರೋಹನ್ ಭಟ್ ನನ್ನನ್ನು ಬಂಧಿಸಿದ್ದು, ತನಿಖೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *