Video: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಡಿಸ್ಟರ್ಬ್​ ಮಾಡಿದ ರಾಹುಲ್ ಗಾಂಧಿ

Video: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಡಿಸ್ಟರ್ಬ್​ ಮಾಡಿದ ರಾಹುಲ್ ಗಾಂಧಿ


ನವದೆಹಲಿ, ಫೆ.12: ಸಂಸತ್ತಿನ ಮುಂಭಾಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಅಶ್ವಿನಿ ವೈಷ್ಣವ್ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯೆ ಬಂದು ತೊಂದರೆ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರು ನಾಯಕರು ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಸಮಯದಲ್ಲಿ ರಾಹುಲ್ ಗಾಂಧಿ ಸಚಿವರ ಪಕ್ಕ ಬಂದು ನಿಂತಿದ್ದರು.

ಕೂಡಲೇ ಇರುಸು ಮುರುಸು ಉಂಟಾಗಿ ಸಚಿವರು ಅಲ್ಲಿಂದ ಹೋಗಿದ್ದಾರೆ. ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದು ಬಿಜೆಪಿ ಫೇಸ್ ಬುಕ್ ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸ್ವಲ್ಪ ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಸೇರಿದ್ದಾರೆ ಎಂಬ ಏಕೈಕ ಕಾರಣಕ್ಕೆ ಸಂಸದ ರವನೀತ್‌ ಸಿಂಗ್‌ ಬಿಟ್ಟು ಅವರನ್ನು, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಗದ್ದಾರ್‌ (ದ್ರೋಹಿ) ಎಂದು ಕರೆಯುವ ಮೂಲಕ ತೀವ್ರ ವಿವಾದ ಸೃಷ್ಟಿಸಿದ್ದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *