ಬೆಂಗಳೂರು, ಫೆಬ್ರವರಿ 11: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಡೆಸುತ್ತಿದ್ದ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಬಿಡಿಎ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಅವರು ಅಧಿಕಾರಿಗೆ ಧಮ್ಕಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಿಡಿಎ ಇಇಇ ಅಂಗಡಿ ಅಶೋಕ್ ಬಾಗಿ ಅವರು ಕಾರ್ಯಾಚರಣೆ ನಡೆಸುತ್ತಿದ್ದಾಗ, ಆಯುಕ್ತರ ಆದೇಶವನ್ನೇ ಪ್ರಶ್ನಿಸಿ ಮಂಜುನಾಥ್ ಗಲಾಟೆ. ಘಟನೆ ಬಳಿಕ ಬಿಡಿಎ ಆಯುಕ್ತ ಮಹೇಶ್ವರ್ ರಾವ್ ಅವರು ತಕ್ಷಣವೇ ಮಂಜುನಾಥ್ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ, ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ. ಇಂತಹ ಪ್ರಕರಣಗಳು ಮರುಕಳಿಸಬಾರದು ಎಂದು ಆಯುಕ್ತರು ಗಂಭೀರ ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.