ಸರ್ದಾರ್ ಸರ್ಫರಾಜ್ ಖಾನ್ಗೆ ತಾತ್ಕಾಲಿಕ ರಿಲೀಫ್ಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ
ಬೆಂಗಳೂರು, ಫೆಬ್ರವರಿ 12: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತಡೆ ನೀಡಿದೆ. ಅರ್ಜಿದಾರರ ಪರ ವಾದಿಸಿರುವ ಹಿರಿಯ ವಕೀಲ ಸಿ.ಹೆಚ್.ಜಾಧವ್, ಆಸ್ತಿಗಳ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಘೋಷಣೆ ಮಾಡಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಆದರೆ ಲೋಕಾಯುಕ್ತ ಪರ ವಕೀಲ ಬಿ.ಬಿ.ಪಾಟೀಲ್ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಪರಿಶೀಲನೆಯಲ್ಲಿ ಶೇ.131ರಷ್ಟು ಆದಾಯ ಮೀರಿದ ಆಸ್ತಿ ಗಳಿಕೆ ಕಂಡುಬಂದಿದೆ. ಸರ್ದಾರ್ ಸರ್ಫರಾಜ್ ಖಾನ್, 2 ಕೋಟಿ 80 ಲಕ್ಷ ಕೃಷಿ ಆದಾಯ ಬಂದಿದೆ. ಆದರೆ ಅದಕ್ಕೆ ಆಧಾರ ಒದಗಿಸಿಲ್ಲ ಎಂದು ನ್ಯಾಯಾಲಯಕ್ಕೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಐಟಿ ಇಲಾಖೆಗೆ ಎಲ್ಲಿಂದಲಾದರೂ ಆದಾಯವಿದೆಯೇ ಇಲ್ಲವೇ ಎಂದು ಫೆ.27ಕ್ಕೆ ಮಾಹಿತಿ ನೀಡಲು ಸೂಚಿಸಿ ತನಿಖೆಗೆ ತಡೆ ನೀಡಿದೆ.
ಸರ್ದಾರ್ ಸರ್ಫರಾಜ್ ಖಾನ್ ನಿವಾಸದಲ್ಲಿ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಮಾಡಲಾಗಿತ್ತು. 8.44 ಕೋಟಿ ರೂ. ಮೌಲ್ಯ ಸ್ಥಿರಾಸ್ತಿ ಮತ್ತು 5.93 ಕೋಟಿ ರೂ. ಮೊತ್ತದ ಚರಾಸ್ತಿ ದಾಳಿ ವೇಳೆ ಇದೆ. 4 ವಾಸದ ಮನೆ ಮತ್ತು 35 ಕೃಷಿ ಜಮೀನು ದಾಖಲೆ, 6,500 ಹಣ, 2.99 ಲಕ್ಷ ಮೌಲ್ಯದ ಚಿನ್ನ, 1.29 ಕೋಟಿ ಎಫ್‌ಡಿ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ: ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಗೆ ಲೋಕಾಯುಕ್ತ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತು ಇದೆ ಗೊತ್ತೇ?
ಬೆಂಗಳೂರಿನ ಹಲಸೂರು ನಿವಾಸ, ಇತರ ಆರು ಮನೆಗಳು ಸೇರಿದಂತೆ ಒಟ್ಟು ಏಳು ಮನೆಗಳು, ಕೊಡಗಿನ ಎರಡು ಕಾಫಿ ಎಸ್ಟೇಟ್‌ಗಳು ಮತ್ತು ಹೆಚ್.ಡಿ.ಕೋಟೆಯ ಒಂದು ರೆಸಾರ್ಟ್‌ನಲ್ಲಿ ಸರ್ಫರಾಜ್ ಖಾನ್‌ಗೆ ಸೇರಿದ ಒಟ್ಟು 13 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿ, ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಾಗಿದೆ. ಈ ಡಿ.24 ಬೆಳ್ಳಂ ಬೆಳಗ್ಗೆ 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. ಎಲ್ಲಾ ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಆಸ್ತಿ ವಿವರಗಳ ಸಂಗ್ರಹ ಕಾರ್ಯ ನಡೆಸಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.