Headlines

ಸ್ಕೂಲ್‌ನಲ್ಲಿ ಚಾಕೋಲೇಟ್ ಆಸೆ ತೋರಿಸಿ ಬಾಲಕಿಯನ್ನ ಕಾರಲ್ಲಿ ಕರೆದೊಯ್ದ ಶಿಕ್ಷಕ; ಮುಂದಾಗಿದ್ದು ಹೇಯ ಕೃತ್ಯ! | Teacher Arrested Under Pocso For Alleged Sexual Harassment Of Minor Girl In Bidar Sat

ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ, ಚಾಕಲೇಟ್ ಆಮಿಷವೊಡ್ಡಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೊಬ್ಬನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕ ಮಲ್ಲಿಕಾರ್ಜುನ ಪರ್ತಾಪುರೆಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಬೀದರ್ (ಫೆ.12): ವಿದ್ಯೆ ಕಲಿಸುವ ಪವಿತ್ರ ವೃತ್ತಿಯಲ್ಲಿ ಇರುವ ಶಿಕ್ಷಕನೊಬ್ಬ ಬಾಲಕಿಗೆ ಚಾಕಲೇಟ್ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಘಟನೆ ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಾಹಿತಿಯ ಪ್ರಕಾರ, ಫೆಬ್ರವರಿ 2ರಂದು ಗ್ರಾಮದ ಸಮೀಪ ಆಟವಾಡುತ್ತಿದ್ದ ಬಾಲಕಿಯನ್ನು ‘ಚಾಕಲೇಟ್ ಕೊಡ್ತಿನಿ ಬಾ’ ಎಂದು ಹೇಳಿ ಕಾರಿನೊಳಗೆ ಕರೆದೊಯ್ದ ಆರೋಪ ಶಿಕ್ಷಕನ ಮೇಲೆ ಕೇಳಿಬಂದಿದೆ. ಶಿಕ್ಷಕನನ್ನು ನಂಬಿ ಕಾರಿನಲ್ಲಿ ಹತ್ತಿದ ಬಾಲಕಿಯೊಂದಿಗೆ ಆತ ಅಸಭ್ಯ ವರ್ತನೆ ತೋರಿದ್ದಾನೆ ಎನ್ನಲಾಗಿದೆ. ಘಟನೆ ನಂತರ ಬಾಲಕಿ ಮನೆಯಲ್ಲಿ ವಿಷಯ ತಿಳಿಸಿದ ಹಿನ್ನೆಲೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್

ಫೆಬ್ರವರಿ 10ರಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಮಲ್ಲಿಕಾರ್ಜುನ ಪರ್ತಾಪುರೆ (58) ವಿರುದ್ಧ ಪೊಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಶಿಕ್ಷಕರಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಕೃತ್ಯ ಎಸಗಿರುವುದು ವಿಷಾದನೀಯ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ. ಬಾಲಕಿಯ ಆರೋಗ್ಯ ಮತ್ತು ಮಾನಸಿಕ ಸ್ಥಿತಿಗೆ ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

Source link

Leave a Reply

Your email address will not be published. Required fields are marked *