ರಾಕಿಂಗ್ ಸ್ಟಾರ್ ಯಶ್ (ಯಶ್) ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೆರಿಟೇಲ್ ಫಾರ್ ಗ್ರೋನ್-ಅಪ್ಸ್’ ಇದೀಗ ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ವಿತರಣೆ ಹಕ್ಕುಗಳ ಮಾರಾಟದಲ್ಲಿ ಸಿನಿಮಾದ ಸಹ ನಿರ್ಮಾಪಕ ಯಶ್ ಮತ್ತು ಮತ್ತೊಬ್ಬ ನಿರ್ಮಾಪಕ ಕೆವಿಎನ್ ಅವರು ತೊಡಗಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಆಂಧ್ರ ಮತ್ತು ತೆಲಂಗಾಣ ವಿತರಣೆ ಹಕ್ಕು ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ. ಇದೀಗ ಬಹು ಮುಖ್ಯವಾದ ಉತ್ತರ ಭಾರತದ ಹಕ್ಕು ಮಾರಾಟ ಪ್ರಕ್ರಿಯೆ ನಡೆದಿದ್ದು, ಯಶ್ ತಮ್ಮ ಹಳೆಯ ಗೆಳೆಯರೊಟ್ಟಿಗೆ ಮತ್ತೊಮ್ಮೆ ಕೈ ಜೋಡಿಸಿದ್ದಾರೆ.
‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಸಿನಿಮಾವನ್ನು ಉತ್ತರ ಭಾರತದಲ್ಲಿ ಅನಿಲ್ ತಡಾನಿ ಅವರ ‘ಎಎ ಫಿಲ್ಮ್ಸ್’ ಯಶಸ್ವಿಯಾಗಿ ವಿತರಣೆ ಮಾಡಿತ್ತು. ‘ಕೆಜಿಎಫ್’ ಸಿನಿಮಾ ಸರಣಿಯ ಯಶಸ್ವಿನಲ್ಲಿ ಪ್ರಮುಖ ಪಾತ್ರವಹಿಸಿತ್ತು. ಇದೇ ಕಾರಣಕ್ಕೆ ಇದೀಗ ‘ಟಾಕ್ಸಿಕ್’ ಸಿನಿಮಾವನ್ನು ಸಹ ಇಎ ಫಿಲಮ್ಸ್ ಅವರಿಗೇ ನೀಡಿದ್ದ ಯಶ್.
ಕೆಜಿಎಫ್ ಚಾಪ್ಟರ್ 1 ಮತ್ತು 2 ಚಿತ್ರ ಉತ್ತರ ಭಾರತ ಮತ್ತು ನೇಪಾಳದ ನೈಸರ್ಗಿಕ ದೊಡ್ಡ ಮಟ್ಟಕ್ಕೆ ಕೊಂಡೊಯ್ದ ಹೆಗ್ಗಳಿಕೆ ಅನಿಲ್ ತಡಾನಿ ಅವರದ್ದು. ‘ಟಾಕ್ಸಿಕ್’ ಚಿತ್ರದ ವಿತರಣೆಯನ್ನು ಈಗ ಅವರು ವಹಿಸಿಕೊಂಡಿದ್ದಾರೆ, ಉತ್ತರ ಭಾರತದಲ್ಲಿ ಈ ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಗುವುದು ಪಕ್ಕಾ ಎನ್ನಲಾಗುತ್ತಿದೆ. ಈ ಮೂಲಕ ಯಶ್ ಮತ್ತು ಅನಿಲ್ ತಡಾನಿ ಜೋಡಿ ಹ್ಯಾಟ್ರಿಕ್ ಯಶಸ್ಸಿನ ನಿರೀಕ್ಷೆಯಲ್ಲಿದೆ.
ಇದನ್ನೂ ಓದಿ:ಯಶ್, ರಣಬೀರ್ ನಟನೆಯ ‘ರಾಮಾಯಣ’ಕ್ಕೆ ಯುವ ಸ್ಟಾರ್ ಎಂಟ್ರಿ
ಉತ್ತರ ಭಾರತ ಮತ್ತು ನೇಪಾಳದಲ್ಲಿ ‘ಟಾಕ್ಸಿಕ್’ ಸಿನಿಮಾವನ್ನು ಇಎ ಫಿಲ್ಮ್ಸ್ ನ ಅನಿಲ್ ತಡಾನಿ ಮಾಡಲಿದ್ದಾರೆ. ತೆಲುಗು ರಾಜ್ಯಗಳಾದ ಆಂಧ್ರ ಮತ್ತು ತೆಲಂಗಾಣದಲ್ಲಿ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ನ ದಿಲ್ ರಾಜು ವಿತರಣೆ ಮಾಡಲಿದ್ದಾರೆ. ಇನ್ನು ವಿದೇಶದ ವಿತರಣೆ ಹಕ್ಕನ್ನು ಫಾರ್ಸ್ ಫಿಲ್ಮ್ಸ್ ಗೆ ಮಾರಾಟ ಮಾಡಲಾಗಿದೆ. ಮೂರು ಕಡೆಯ ದಾಖಲೆಯ ಮೊತ್ತಕ್ಕೆ ಸಿನಿಮಾದ ವಿತರಣೆ ಹಕ್ಕುಗಳನ್ನು ಮಾರಾಟ ಮಾಡಲಾಗಿದೆ.
‘ಟಾಕ್ಸಿಕ್’ ಸಿನಿಮಾವು ಮಾರ್ಚ್ 19 ರಂದು ಬಿಡುಗಡೆಯಾಗಲಿದೆ. ಅದೇ ದಿನ ‘ಧುರಂಧರ 2’ ಸಿನಿಮಾ ಸಹ ಬಿಡುಗಡೆ ಆಗಲಿದೆ. ಹಾಗಿದ್ದರೂ ಸಹ ಉತ್ತರ ಭಾರತದ ವಿತರಣೆ ಹಕ್ಕುಗಳು ದೊಡ್ಡ ಮೊತ್ತಕ್ಕೆ ಮಾರಾಟವಾಗುತ್ತಿರುವುದು ವಿತರಕರಿಗೆ ‘ಟಾಕ್ಸಿಕ್’ ಮೇಲಿರುವ ನಂಬಿಕೆಯನ್ನು ತೋರಿಸುತ್ತಿದೆ. ಗೀತು ಮೋಹನ್ ದಾಸ್ ನಿರ್ದೇಶನ ಮಾಡಿರುವ ಯಶ್ ಜೊತೆಗೆ ಈ ಚಿತ್ರದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ಕನ್ನಡಿಗರಿಗೆ ಪ್ರಿಯರಾದ ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ಚಿತ್ರೀಕರಣಗೊಳ್ಳುತ್ತಿರುವ ಈ ಸಿನಿಮಾ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 7:53 pm, ಗುರುವಾರ, 12 ಫೆಬ್ರವರಿ 26