Headlines

Karnataka Budget 2026-27: ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್​​​ಗೆ ದಿನಾಂಕ ನಿಗದಿ

Karnataka Budget 2026-27: ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್​​​ಗೆ ದಿನಾಂಕ ನಿಗದಿ


ಬೆಂಗಳೂರು, ಫೆಬ್ರವರಿ 12: ರಾಜ್ಯ ಕಾಂಗ್ರೆಸ್ ಅಂಗಗಳಲ್ಲಿ ಕುರ್ಚಿ ಕಾಳಗ ಮಧ್ಯೆ ಇದೀಗ 2026-27ನೇ ಆರ್ಥಿಕ ವರ್ಷದ ಕರ್ನಾಟಕ ರಾಜ್ಯ ಬಜೆಟ್ (ಕರ್ನಾಟಕ ಬಜೆಟ್) ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ, ಮಾ.6ರಂದು ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ, ಅಧಿವೇಶನದ ಮೊದಲ ದಿನವಾದ ಮಾರ್ಚ್ 6ರಂದು ಮುಖ್ಯಮಂತ್ರಿ ಹಾಗೂ ರಾಜ್ಯದ ಹಣಕಾಸು ಸಚಿವ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡಿಸಲಿದ್ದಾರೆ. ಆ ಮೂಲಕ ಅವರು ಹೆಚ್ಚು ಬಾರಿ ಬಜೆಟ್ ಮಂಡಿಸಿದ ನಾಯಕರ ಸಾಲಿನಲ್ಲಿ ಮತ್ತೊಮ್ಮೆ ಗುರುತಿಸಿಕೊಳ್ಳಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

ಇನ್ನು ಅಧಿಕಾರ ಹಂಚಿಕೆ ವಿಚಾರ ಚರ್ಚೆ ಮಧ್ಯೆ 206-27ನೇ ಸಾಲಿನ ಆಯವ್ಯಯದ ಪೂರ್ವಸಿದ್ಧತೆಯ ಸಿದ್ಧತೆಯಲ್ಲಿ ತೊಡಗಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ, ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ಸಭೆಗಳನ್ನು ನಡೆಸುತ್ತಿದ್ದಾರೆ. ಹಣಕಾಸು ಪರಿಸ್ಥಿತಿ, ಯೋಜನೆಗಳ ಪ್ರಗತಿ ಹಾಗೂ ಜನಪರ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಇಂದು ಹಿಂದುಳಿದ ಜಾತಿ, ವರ್ಗ ಮತ್ತು ಸಮುದಾಯಗಳ ಸಭೆ ನಡೆಸಿ, ಅವರ ಬೇಡಿಕೆಗಳನ್ನು ಆಲಿಸಿದ್ದಾರೆ. ಮುಂಬರುವ ಬಜೆಟ್ನಲ್ಲಿ ತೋರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿದಂತೆ 230ಕ್ಕೂ ಅಧಿಕ ಜನರು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: 5 ವರ್ಷವೂ ನಾನೇ ಸಿಎಂ: ವಿರೋಧಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಕ್ಕರ್

ರಾಜ್ಯದ ಆರ್ಥಿಕ ಸ್ಥಿತಿ, ಅಭಿವೃದ್ಧಿ ಯೋಜನೆಗಳು ಹಾಗೂ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಿಗೆ ಒತ್ತು ನೀಡುವ ನಿರೀಕ್ಷೆ ಇರುವ ಈ ಬಜೆಟ್ ಕುರಿತು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 9:28 pm, ಗುರುವಾರ, 12 ಫೆಬ್ರವರಿ 26





Source link

Leave a Reply

Your email address will not be published. Required fields are marked *