ಚಾಮರಾಜನಗರ, ಫೆ.13: ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಿನಲ್ಲಿ ಒಂದು ಭೀಕರ ಅಪಘಾತ ಸಂಭವಿಸಿದೆ. ಕೆಎಸ್ ಆರ್ ಟಿಸಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಬರ್ತಿದ್ದ ಸರ್ಕಾರಿ ಬಸ್ ಮುಂದೆ ಬಂದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮಹದೇಶ್ವರ ಬೆಟ್ಟದ ಪೊಲೀಸರ ಭೇಟಿ, ಪರಿಶೀಲನೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ