ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ತನೆ ನಿಧನರಾದರು. ಫಿಲಂ ಚೇಂಬರ್ನಲ್ಲಿ ನಡೆಯುತ್ತಿದ್ದ ಸಭೆಯೊಂದರಲ್ಲಿ ಭಾಗಿ ಆಗಿದ್ದಾಗಲೇ ಜೋಸೈಮನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸಿದೆ ಜೋ ಸೈಮನ್ ಅವರು ಕೊನೆ ಉಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಜೋ ಸೈಮನ್ ಅವರು ಕನ್ನಡದ ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ನಿರ್ದೇಶಕ, ನಟ, ಗೀತರಚನೆಕಾರನಾಗಿ ಅವರು ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.
ರಂದು ಪ್ರಕಟಿಸಲಾಗಿದೆ – 5:29 pm, ಶುಕ್ರ, 13 ಫೆಬ್ರವರಿ 26