ಬಾಂಗ್ಲಾದೇಶದಲ್ಲಿ ಬಿಎನ್‌ಪಿಗೆ ಭರ್ಜರಿ ಜಯ; ತಾರಿಕ್ ರೆಹಮಾನ್​ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ಬಾಂಗ್ಲಾದೇಶದಲ್ಲಿ ಬಿಎನ್‌ಪಿಗೆ ಭರ್ಜರಿ ಜಯ; ತಾರಿಕ್ ರೆಹಮಾನ್​ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ


ನವದೆಹಲಿ, ಫೆಬ್ರವರಿ 13: ನೆರೆಯ ದೇಶವಾದ ಬಾಂಗ್ಲಾದೇಶದ ಸಂಸತ್ತಿನಲ್ಲಿ ಬಿಎನ್‌ಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (ಪ್ರಧಾನಿ ಮೋದಿ) ಇಂದು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ನಾಯಕ ತಾರಿಕ್ ರೆಹಮಾನ್ ಅವರೊಂದಿಗೆ ಮಾತನಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಎರಡೂ ದೇಶಗಳ ಜನರ ನಡುವೆ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತದ ನಿರಂತರ ಬದ್ಧತೆಯನ್ನು ಮೋದಿ ಪುನರುಚ್ಛರಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ”ತಾರಿಕ್ ರೆಹಮಾನ್ ಅವರೊಂದಿಗೆ ಮಾತನಾಡಿ ಸಂತೋಷವಾಯಿತು. ಬಾಂಗ್ಲಾದೇಶದ ಚುನಾವಣೆಯ ಭರ್ಜರಿ ಗೆಲುವಿಗಾಗಿ ನಾನು ಅವರನ್ನು ಅಭಿನಂದಿಸುತ್ತೇನೆ.

ಇದನ್ನೂ ಓದಿ: ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

“ಆಳವಾಗಿ ಬೇರೂರಿರುವ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಹೊಂದಿರುವ ಇಬ್ಬರು ನಿಕಟ ನೆರೆಹೊರೆಯವರಾಗಿ ನಮ್ಮ ಎರಡೂ ದೇಶಗಳ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತದ ನಿರಂತರ ಬದ್ಧತೆಯನ್ನು ನಾನು ಪುನರುಚ್ಚರಿಸಿದ್ದೇನೆ” ಎಂದು ಪ್ರಧಾನಿ ಹೇಳಿದರು.

ಬಾಂಗ್ಲಾದೇಶದಲ್ಲಿ ನಡೆದ 13ನೇ ರಾಷ್ಟ್ರೀಯ ಸಂಸತ್ ಚುನಾವಣೆಯಲ್ಲಿ ತಾರಿಕ್ ರೆಹಮಾನ್ ನೇತೃತ್ವದಲ್ಲಿ ಬಿಎನ್‌ಪಿ ನಿರ್ಣಾಯಕ ಬಹುಮತ ಪಡೆದ ಪ್ರಧಾನಿ ಮೋದಿ ಅವರು ಶುಭಾಶಯ ಕೋರಿದ್ದಾರೆ. ಬಾಂಗ್ಲಾದೇಶದ 299 ಸ್ಥಾನಗಳಲ್ಲಿ ಬಿಎನ್‌ಪಿ ಮತ್ತು ಅದರ ಮಿತ್ರಪಕ್ಷಗಳು 212 ಸ್ಥಾನಗಳನ್ನು ಗೆದ್ದಿವೆ. ಪಕ್ಷವಾರು ಅಂಕಿಅಂಶಗಳು ಬಿಎನ್‌ಪಿ ತನ್ನದೇ ಆದ 209 ಸ್ಥಾನಗಳನ್ನು ಗೆದ್ದಿದೆ ಎಂದು ತೋರಿಸಿದೆ. ಬಹುಮತದ ಸಂಖ್ಯೆ 150 ಆಗಿದೆ. ಹೀಗಾಗಿ, ಬಿಎನ್‌ಪಿ ಅಧ್ಯಕ್ಷ ತಾರಿಕ್ ರೆಹಮಾನ್ ಪ್ರಧಾನಿಯಾಗುವುದು ಖಚಿತವಾಗಿದೆ.

ಇದನ್ನೂ ಓದಿ: ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಪ್ರಧಾನಿ ಮೋದಿ

ಆಗಸ್ಟ್ 2024ರಲ್ಲಿ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಗಳ ಬಳಿಕ ಶೇಖ್ ಹಸೀನಾ ಅವರ 15 ವರ್ಷಗಳ ಸರ್ಕಾರ ಪತನವಾಯಿತು. ಬಳಿಕ ನೊಬೆಲ್ ಪ್ರಶಸ್ತಿ ವಿಜೇತ ಮಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಧಿಕಾರದಲ್ಲಿತ್ತು. ಇದೀಗ ಬಿಎನ್‌ಪಿಯ ನಾಯಕ ತಾರಿಕ್ ರೆಹಮಾನ್ ಮುಂದಿನ ಪ್ರಧಾನಿಯಾಗಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *