ಆನೇಕಲ್, ಫೆಬ್ರವರಿ 13: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಉದ್ಯಾನವನದ ಪ್ರಾಣಿ ಪಾಲಕ ಶಾಂತಪ್ಪ ಮೇಲೆ ಚಿರತೆ ದಾಳಿ ಮಾಡಿದ್ದು, ಮುಖ, ಕತ್ತಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಸದ್ಯ ಶಾಂತಪ್ಪರನ್ನ ಜಿಗಣಿಯ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆಯ ಬಗ್ಗೆ ಶಾಂತಪ್ಪ ಪತ್ನಿ ಜಯಮ್ಮ ಪ್ರತಿಕ್ರಿಯಿಸಿದ್ದು, ಬನ್ನೇರುಘಟ್ಟ ಝೂನಲ್ಲಿ ಕಳೆದ 25 ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಕಾಡೆಮ್ಮೆ ದಾಳಿಯಿಂದ ಬಳಲಿದ್ದರು. ಇದೀಗ ಚಿರತೆ ದಾಳಿ ಮಾಡಿದೆ. ಮನೆಗೆ ಆಧಾರವಾಗಿದ್ದಾರೆ. ಅವರನ್ನ ಖಾಯಂ ನೌಕರರನ್ನಾಗಿ ಮಾಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.