ಸೂಪರ್ ಸ್ಟಾರ್ ರಜಿನಿಕಾಂತ್ (ರಜಿನಿಕಾಂತ್) ಮತ್ತು ಕಮಲ್ ಹಾಸನ್ (ಕಮಲ್ ಹಾಸನ್) ಭಾರತೀಯ ಚಿತ್ರರಂಗದ ಇಬ್ಬರು ಧ್ರುವತಾರೆಗಳು. ತಮಿಳು ಚಿತ್ರರಂಗವನ್ನು ಸುಮಾರು ಐದು ಇರುವಿಂದಲೂ ಆಳಿಕೊಂಡು ಬಂದಿದೆ ಈ ಜೋಡಿ. ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ಒಂದೇ ಸಿನಿಮಾದಲ್ಲಿ ನಟಿಸಿ ವರ್ಷಗಳೇ ಉರುಳಿ ಹೋಗಿವೆ. ಆದರೆ ಈಗ ಸುಮಾರು 35 ವರ್ಷಗಳ ನಂತರ ಈ ಇಬ್ಬರೂ ನಟರು ಮತ್ತೆ ಒಂದಾಗುತ್ತಿದ್ದಾರೆ. ವಿಶೇಷವೆಂದರೆ ರಜನೀಕಾಂತ್ ಜೊತೆಗಿನ ಸಿನಿಮಾಕ್ಕೆ ಕಮಲ್ ಹಾಸನ್ ಬಂಡವಾಳ ಹೂಡುತ್ತಿದ್ದಾರೆ. ಇದೊಂದು ಐತಿಹಾಸಿಕ ಸಿನಿಮಾ ಆಗಲಿದೆ ಎನ್ನಲಾಗುತ್ತಿದೆ. ಆದರೆ ರಜನೀಕಾಂತ್ ಮಾತ್ರ, ಗೆಳೆಯನಿಗೆ ಯಾವುದೇ ರಿಯಾಯಿತಿ ನೀಡದೆ ದೊಡ್ಡ ದೊಡ್ಡ ಸಂಭಾವನೆಯನ್ನೇ ಸಿನಿಮಾಕ್ಕಾಗಿ ತೆಗೆದುಕೊಳ್ಳುತ್ತಿದ್ದಾರೆ.
ರಜನೀಕಾಂತ್ ನಾಯಕನಾಗಿ ನಟಿಸಲಿರುವ ಸಿನಿಮಾವನ್ನು ಕಮಲ್ ಹಾಸನ್ ನಿರ್ಮಾಣ ಮಾಡಲಿದ್ದಾರೆ, ಜೊತೆಗೆ ತಾವೂ ಸಹ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಮೆಗಾ ಪ್ರಾಜೆಕ್ಟ್‌ಗಾಗಿ ರಜಿನಿಕಾಂತ್ ಅವರಿಗೆ ಬರೋಬ್ಬರಿ 225 ಕೋಟಿ ರೂಪಾಯಿ ಸಂಭಾವನೆಯನ್ನು ನಿರ್ಮಾಪಕ ಕಮಲ್ ಹಾಸನ್ ನೀಡಲಿದ್ದಾರೆ. ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಒಬ್ಬ ನಟನಿಗೆ ನೀಡುತ್ತಿರುವ ಅತ್ಯಂತ ಗರಿಷ್ಠ ಸಂಭಾವನೆಗಳಲ್ಲಿ ಒಂದಾಗಲಿದೆ. ಕಮಲ್ ಹಾಸನ್ ಅವರ ಸ್ವಂತ ನಿರ್ಮಾಣ ಸಂಸ್ಥೆಯಾದ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.
ಬಹುನಿರೀಕ್ಷಿತ ಚಿತ್ರಕ್ಕೆ ಯುವ ಪ್ರತಿಭೆ ಲೋಕೇಶ್ ಕನಗರಾಜ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ ಆದರೆ ಅದೀಗ ಸುಳ್ಳಾಗಿದೆ. ಲಭ್ಯವಿರುವ ಲೋಕೇಶ್ ಅವರೇ ಆ ಸಿನಿಮಾ ನಿರ್ದೇಶಿಸುತ್ತಿಲ್ಲ. ‘ಮಹಾರಾಜ’ ಸಿನಿಮಾ ಮೂಲಕ ಭಾರಿ ದೊಡ್ಡ ಹಿಟ್ ನೀಡಿದ್ದಾರೆ ನಿತಿಲನ್ ಸ್ವಾಮಿನಾಥನ್ ನಿರ್ದೇಶಿಸಲಿದ್ದಾರೆ ಎನ್ನಲಾಯ್ತು. ಬಳಿಕ ಅದು ಸಹ ಸುಳ್ಳಾಗಿದ್ದರೆ ‘ಜೈಲರ್’, ‘ಜೈಲರ್ 2’ ನಿರ್ದೇಶಿಸಿರುವ ನೆಲ್ಸನ್ ದಿಲೀಪ್ ಕುಮಾರ್ ಅವರು ಇದೀಗ ಈ ಸಿನಿಮಾ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.
ಇದನ್ನೂ ಓದಿ:ಸ್ವಚ್ಛತಾ ಕಾರ್ಮಿಕ ಮಹಿಳೆ ಪದ್ಮಮ್ಮನ ಸನ್ಮಾನಿಸಿದ ರಜನೀಕಾಂತ್: ಕಾರಣ?
ಸುಮಾರು 35 ವರ್ಷಗಳ ಹಿಂದೆ ‘ಗಿರ್ಫ್ತಾರ್’ ಸಿನಿಮಾದಲ್ಲಿ ರಜನೀಕಾಂತ್ ಮತ್ತು ಕಮಲ್ ಹಾಸನ್ ಕೊನೆಯದಾಗಿ ಒಟ್ಟಿಗೆ ನಟಿಸಿದ್ದರು. ಇದೀಗ 35 ವರ್ಷಗಳ ಬಳಿಕ ಇಬ್ಬರೂ ಒಟ್ಟಿಗೆ ನಟಿಸಲಿರುವುದು ಸಿನಿಮಾ ಚಿತ್ರಕ್ಕೆ ಭಾರಿ ಕುತೂಹಲ ಮೂಡಿಸಿದೆ. ಸಿನಿಮಾಕ್ಕಾಗಿ ರಜನೀಕಾಂತ್ ಮತ್ತು ಕಮಲ್ ಹಾಸನ್ ಅಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದಾರೆ. ಸಿನಿಮಾದ ಟೈಟಲ್ ಪ್ರೋಮೊ ಚಿತ್ರೀಕರಣ ನಾಳೆ (ಫೆಬ್ರವರಿ 14) ಆಗುತ್ತಿದೆ.
ರಜಿನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರಿಗೂ ಸಮಾನ ಪ್ರಾಮುಖ್ಯತೆ ಇರುವ ಕಥೆಯನ್ನು ಸಿದ್ಧಪಡಿಸಲಾಗಿದೆ. ಸದ್ಯ ರಜಿನಿಕಾಂತ್ ಅವರು ‘ಜೈಲರ್ 2’ ಸಿನಿಮಾದಲ್ಲಿ ಬ್ಯೂಸಿಯಾಗಿದ್ದರೆ. ಕಮಲ್ ಹಾಸನ್ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಲಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ