ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣ: ತೆರೆವಿಗೆ ಯತ್ನಿಸಿದ್ದಕ್ಕೆ ತಹಶೀಲ್ದಾರ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಹೈಡ್ರಾಮಾ

ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣ: ತೆರೆವಿಗೆ ಯತ್ನಿಸಿದ್ದಕ್ಕೆ ತಹಶೀಲ್ದಾರ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಹೈಡ್ರಾಮಾ


ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ನಿರ್ಮಾಣ ನಡೆದ ಮನೆ, ತಹಶೀಲ್ದಾರ್

ಚಿಕ್ಕಬಳ್ಳಾಪುರ, ಫೆಬ್ರವರಿ 14: ಆತನಿಗೆ ರಸ್ತೆ ಬದಿಯೇ ಸ್ವಂತ ಜಮೀನಿದೆ. ಸ್ವಂತ ಜಮೀನಿಗೆ ಹೊಂದಿಕೊಂಡಂತೆ ಇರುವ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ (ಭೂಮಿ ವಿವಾದ) ಮನೆ ನಿರ್ಮಾಣಕ್ಕೆ ಮುಂದಾಗಿದ್ದರು. ಇದರಿಂದ ಅಲ್ಲಿಯ ತಹಶೀಲ್ದಾರ್ ನಿರ್ಮಾಣದ ಮನೆಯನ್ನು ತೆರೆವುಗೊಳಿಸಲು ಮುಂದಾಗಿದ್ದೆ ತಡ, ಹೆದುರಿಸಲು ತಹಶೀಲ್ದಾರ್ ಡೆತ್‌ನೋಟ್ ಬರೆದಿಟ್ಟು, ಆಂಟಿಬಯೋಟಿಕ್ಸ್ ಮಾತ್ರ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ (ಆತ್ಮಹತ್ಯೆ ಪ್ರಯತ್ನ) ಹೈರಾಮಾ ನಡೆಸಿರುವ ಘಟನೆ ಜಿಲ್ಲೆಯ ಮಂಚೇನಹಳ್ಳಿ ತಾಲ್ಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಡೆದಿದ್ದೇನು?

ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ನಿವಾಸಿ ಜಿ.ರಾಧಾಕೃಷ್ಣ ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ರಾಧಾಕೃಷ್ಣ ಹಾಗೂ ಇವರ ಪತ್ನಿ ಗ್ರಾಮಪಂಚಾಯ್ತಿಯಲ್ಲಿ ನೌಕರರಾಗಿದ್ದಾರೆ. ಇನ್ನು ಗಿಡಗಾನಹಳ್ಳಿ ಗ್ರಾಮದಲ್ಲಿ ರಸ್ತೆ ಕೃಷ್ಣನಿಗೆ ಹೊಂದಿಕೊಂಡಂತೆ ರಾಧಾಗೆ ಸ್ವಂತ ಜಮೀನಿದೆ. ಸ್ವಂತ ಜಮೀನಿನ ಪಕ್ಕದಲ್ಲಿ ಸರ್ಕಾರಿ ಜಮೀನಿದೆ. ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದರಿಂದ ಮಂಚೇನಹಳ್ಳಿ ತಹಶೀಲ್ದಾರ್ ಪೂರ್ಣಿಮಾ ನಿರ್ಮಾಣದ ಮನೆಯನ್ನು ತೆರೆಯಲು ಮುಂದಾಗಿದ್ದರು. ಇದರಿಂದ ಕೆರಳಿದ ರಾಧಾಕೃಷ್ಣ ತಹಶೀಲ್ದಾರ್‌ರನ್ನು ಬೆದರಿಸಲು ತಹಶೀಲ್ದಾರ್ ವಿರುದ್ಧವೇ ಡೆತ್‌ನೋಟ್ ಬರೆದಿಟ್ಟು, ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ: ಹಾವೇರಿ: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್ ಪಿ

ಇನ್ನು ಗಿಡಗಾನಹಳ್ಳಿ ಹಾಗೂ ಬುದ್ದಿವಂತನಹಳ್ಳಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ರಾಜ್ಯಸರ್ಕಾರ, ಸರ್ಕಾರಿ ಕಟ್ಟಡಗಳ ಸಾರ್ವಜನಿಕ ಉದ್ದೇಶಕ್ಕಾಗಿ ಜಮೀನನ್ನು ಕಾಯ್ದಿರಿಸಿದೆ. ಇದೇ ಜಮೀನಿನಲ್ಲಿ ರಾಧಾಕೃಷ್ಣ ಹಾಗೂ ಅವರ ಪತ್ನಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಆದರೆ ಸ್ಥಳೀಯ ಗೌಡಗೆರೆ ಗ್ರಾಮಪಂಚಾಯ್ತಿ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿ ಜಮೀನಿಗೆ ಖಾತೆ ಮಾಡಿ ಕಟ್ಟಡ ಪರವಾನಿಗೆ ನೀಡಿದ್ದಾರೆ. ಇದನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ತನಿಖೆಗೆ ಸೂಚಿಸಿದ್ದಾರೆ. ಇದನ್ನು ಎದುರಿಸಲು ರಾಧಾಕೃಷ್ಣ ಮುಂದಾಗಿದ್ದಾರೆಂದು ಮಂಚೇನಹಳ್ಳಿ ತಹಶೀಲ್ದಾರ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಕಛೇರಿಯ ಬದಲು ಡಾಬಾದ ಕೆಲಸ, ಎಣ್ಣೆ ಪಾರ್ಟಿ ಮಾಡುತ್ತಲೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್

ಆರ್ಥಿಕವಾಗಿ, ಸಾಮಾಜಿಕವಾಗಿ ಸುಸ್ಥಿತಿಯಲ್ಲಿರುವ ರಾಧಾಕೃಷ್ಣ ಕುಟುಂಬ ಸ್ವಂತ ಜಮೀನನ್ನು ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಲು ಯತ್ನಿಸಿದ್ದು ತಪ್ಪು. ಇಂತಹದರಲ್ಲಿ ಆತ್ಮಹತ್ಯೆ ಹೈಡ್ರಾಮಾ ಮಾಡಿರುವುದು ಇನ್ನು ತಪ್ಪು. ಏನೋ ಮಾಡಲು ಹೋಗಿ, ಏನೋ ಆದರೆ ಹೆಂಡತಿ, ಮಕ್ಕಳು ಬೀದಿಗೆ ಬೀಳಬೇಕಾಗುತ್ತೆ ಎನ್ನುತ್ತಾರೆ ಗ್ರಾಮಸ್ಥರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *