
ಪಟಪಟ ಎಂದು ಮಾತನಾಡುತ್ತಾ, ವೇದಿಕೆಯ ಮೇಲೆ ಆ ಸನ್ನಿವೇಶಕ್ಕೆ ತಕ್ಕಂತೆ ಆ ವಿಷಯವನ್ನು ಹೇಳುತ್ತಾ, ಸದಾ ಎಲ್ಲರನ್ನೂ ನಕ್ಕು ನಗಿಸೋರು ಎಂದರೆ ಅವರು ಆ್ಯಂಕರ್ ಅನುಶ್ರೀ ಎನ್ನುವ ಮಾತಿದೆ. ಆ್ಯಂಕರಿಂಗ್ ಎನ್ನುವ ಕಲೆ ಬೇಕು ಎಂದರೆ ಕರಗತವಾಗುವಂಥದ್ದಲ್ಲ. ಅದರಲ್ಲಿಯೂ ರಿಯಾಲಿಟಿ ಷೋ ಸಕ್ಸಸ್ ಮಾಡುವಲ್ಲಿ ಆ್ಯಂಕರ್ಸ್ ಪಾತ್ರ ಬಹು ಮುಖ್ಯವಾಗಿರುತ್ತದೆ. ಅವರಿಗೆ ಹೀಗೆಯೇ ಮಾತನಾಡಬೇಕು ಎಂದು ಮೊದಲೇ ಸ್ಕ್ರಿಪ್ಟ್ ನೀಡುತ್ತಾರೆಯಾದರೂ, ಎಲ್ಲವೂ ಸ್ಕ್ರಿಪ್ಟ್ನಿಂದಲೇ ನಡೆಯುವಂಥ ಕಲೆ ಆ್ಯಂಕರಿಂಗ್ ಅಲ್ಲ. ಆ ಕ್ಷಣದಲ್ಲಿ, ಆ ಪರಿಸ್ಥಿತಿಗೆ ತಕ್ಕಂತೆ ಮಾತನಾಡುವ, ಜನರನ್ನು ನಗಿಸುವ ಕಲೆ ಸುಲಭವೂ ಅಲ್ಲ. ಅದು ಒಲಿದಿರುವುದು ಆ್ಯಂಕರ್ ಅನುಶ್ರೀ ಅವರಂಥ ಕೆಲವೇ ಕೆಲವು ಆ್ಯಂಕರ್ಗಳಿಗೆ.