Headlines

ಟಿ20 ವಿಶ್ವಕಪ್: ಪಾಕ್ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ ಫಿಕ್ಸ್; ರಿಂಕು ಬದಲು ಯಾರಿಗೆ ಚಾನ್ಸ್?

ಟಿ20 ವಿಶ್ವಕಪ್: ಪಾಕ್ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ ಫಿಕ್ಸ್; ರಿಂಕು ಬದಲು ಯಾರಿಗೆ ಚಾನ್ಸ್?

ಟಿ20 ವಿಶ್ವಕಪ್: ಪಾಕ್ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ ಫಿಕ್ಸ್; ರಿಂಕು ಬದಲು ಯಾರಿಗೆ ಚಾನ್ಸ್?

ಕೊಲಂಬೊ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಹುನಿರೀಕ್ಷಿತ ಪಂದ್ಯದಲ್ಲಿಂದು ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕೆ ಭಾರತ ತಂಡವು ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವುದು ಬಹುತೇಕ ಕನ್ಫರ್ಮ್ ಆಗಿದೆ. ಭಾರತ ಸಂಭಾವ್ಯ ತಂಡ ಹೀಗಿದೆ.

ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಇಂದು ಕೊಲಂಬೊದ ಆರ್‌ ಪ್ರೇಮದಾಸ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯವು ಇಂದು ಸಂಜೆ ಭಾರತೀಯ ಕಾಲಮಾನ 7 ಗಂಟೆಯಿಂದ ಆರಂಭವಾಗಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಎರಡು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವುದು ಬಹುತೇಕ ಖಚಿತ ಎನಿಸಿದೆ.

ಆರೋಗ್ಯ ಸಮಸ್ಯೆಯಿಂದ ನಮೀಬಿಯಾ ಎದುರಿನ ಪಂದ್ಯದಿಂದ ಹೊರಗುಳಿದಿದ್ದ ಅಭಿಷೇಕ್ ಶರ್ಮಾ ಸಂಪೂರ್ಣ ಫಿಟ್ ಆಗಲಿದ್ದು, ಇಂದು ತಂಡ ಕೂಡಿಕೊಳ್ಳಲಿದ್ದಾರೆ. ಹೀಗಾಗಿ ಸಂಜು ಸ್ಯಾಮ್ಸನ್ ಸ್ಥಾನ ಬಿಟ್ಟು ಕೊಡಬೇಕಾಗುತ್ತದೆ. ಅಭಿಷೇಕ್ ಶರ್ಮಾ ಹಾಗೂ ಇಶಾನ್ ಕಿಶನ್ ಆರಂಭಿಕರಾಗಿ ಇನ್ನಿಂಗ್ಸ್ ಶುರು ಮಾಡಲಿದ್ದಾರೆ.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಯಾವುದೇ ಬದಲಾವಣೆಗಳಾಗುವ ಸಾಧ್ಯತೆಯಿಲ್ಲ. ಏಕೆಂದರೆ ತಿಲಕ್ ವರ್ಮಾ ಮೂರನೇ, ನಾಯಕ ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿಯಲಿದ್ದಾರೆ.

ಇನ್ನು ಆಲ್ರೌಂಡರ್‌ಗಳಾಗಿ ಹಾರ್ದಿಕ್ ಪಾಂಡ್ಯ ಐದನೇ, ಅಕ್ಷರ್ ಪಟೇಲ್ ಆರನೇ ಹಾಗೂ ಶಿವಂ ದುಬೆ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿಯಲಿದ್ದಾರೆ. ಈ ಮೂವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚುವ ನಿರೀಕ್ಷೆಯಿದೆ.

ಇನ್ನು ಕಳೆದೆರಡು ಪಂದ್ಯಗಳಲ್ಲಿ ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಲು ವಿಫಲವಾಗಿರುವ ರಿಂಕು ಸಿಂಗ್‌ಗೆ ವಿಶ್ರಾಂತಿ ನೀಡಿ, ವಾಷಿಂಗ್ಟನ್ ಸುಂದರ್ ಇಲ್ಲವೇ ಕುಲ್ದೀಪ್ ಯಾದವ್‌ಗೆ ಮಣೆಹಾಕುವುದು ಬಹುತೇಕ ಖಚಿತವಾಗಿದೆ. ಏಕೆಂದರೆ ಕೊಲಂಬೊದ ಪ್ರೇಮದಾಸ ಸ್ಟೇಡಿಯಂ ಸ್ಪಿನ್ನರ್‌ಗಳಿಗೆ ನೆರವು ನೀಡುವುದರಿಂದ ಟೀಂ ಮ್ಯಾನೇಜ್‌ಮೆಂಟ್ ಓರ್ವ ಹೆಚ್ಚುವರಿ ಸ್ಪಿನ್ನರ್‌ನೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದೆ ಎನ್ನಲಾಗಿದೆ.

ಇನ್ನು ತಜ್ಞ ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿ ಹಾಗೂ ವೇಗದ ಬೌಲರ್‌ಗಳಾಗಿ ಜಸ್ಪ್ರೀತ್ ಬುಮ್ರಾ ಹಾಗೂ ಅರ್ಶದೀಪ್ ಸಿಂಗ್ ಕಣಕ್ಕಿಳಿಯಲಿದ್ದಾರೆ. ಇಂದಿನ ಪಂದ್ಯ ಗೆದ್ದು ಸೂಪರ್-8 ಹಾದಿ ಖಚಿತಪಡಿಸಿಕೊಳ್ಳಲು ಟೀಂ ಇಂಡಿಯಾ ತುದಿಗಾಲಿನಲ್ಲಿ ನಿಂತಿದೆ.

Source link

Leave a Reply

Your email address will not be published. Required fields are marked *