ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರಿನಲ್ಲಿ ಶಿವರಾತ್ರಿಯ ಸಂಭ್ರಮದ ನಡುವೆಯೇ ರಾಮಲಿಂಗೇಶ್ವರ ಹಾಗೂ ನಂದಿ ವಿಗ್ರಹಗಳನ್ನು ಭಗ್ನಗೊಳಿಸಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾದ ಘಟನೆಯ ವಿವರ ಇಲ್ಲಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲೇ ಆಘಾತಕಾರಿ ಘಟನೆಯೊಂದು ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಪುರಾತನ ರಾಮಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಅನಾಮಿಕ ದುಷ್ಕರ್ಮಿಗಳು ದೇವರ ವಿಗ್ರಹಗಳನ್ನು ಭಗ್ನಗೊಳಿಸುವ ಮೂಲಕ ವಿಕೃತಿ ಮೆರೆದಿದ್ದಾರೆ

ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗುರುವಾರವಷ್ಟೇ ದೇವಸ್ಥಾನಕ್ಕೆ ಸುಣ್ಣ-ಬಣ್ಣ ಬಳಿದು ಪೂಜೆಗೆ ಸಿದ್ಧತೆ ಮಾಡಿಕೊಂಡಿದ್ದರು. ಇಂದು ಬೆಳಿಗ್ಗೆ ಎಂದಿನಂತೆ ಭಕ್ತರು ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳಿದಾಗ ವಿಗ್ರಹಗಳು ಭಗ್ನಗೊಂಡಿರುವುದು ಕಂಡುಬಂದಿದೆ. ಇದನ್ನು ಕಂಡು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುಷ್ಕರ್ಮಿಗಳು ರಾಮಲಿಂಗೇಶ್ವರ ಲಿಂಗದ ಪಾಣಿಬಟ್ಟಲು ಹಾಗೂ ಎದುರಿಗಿದ್ದ ನಂದಿ ವಿಗ್ರಹದ ಮುಖವನ್ನು ಪೂರ್ಣವಾಗಿ ಧ್ವಂಸಗೊಳಿಸಿದ್ದಾರೆ. ಅಷ್ಟೇ ಅಲ್ಲದೆ, ದೇವಸ್ಥಾನದ ಹಿಂಭಾಗದಲ್ಲಿದ್ದ ಹೊನ್ನತ್ತೆಮ್ಮ ದೇವಿಯ ವಿಗ್ರಹವನ್ನೂ ವಿರೂಪಗೊಳಿಸಿ ವಿಕೃತಿ ಪ್ರದರ್ಶಿಸಿದ್ದಾರೆ.

Source link
Gadag: ಶಿವರಾತ್ರಿ ದಿನವೇ ರಾಮಲಿಂಗೇಶ್ವರ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳು! (ಫೋಟೋ)