ಮಲ್ಲಿಕಾರ್ಜುನ ಖರ್ಗೆ ಮಾತಿಗೂ ಡೋಂಟ್​​ ಕೇರ್​: ‘ಕೈ’ ಮನೆಯಲ್ಲಿ ನಿಲ್ಲದ ಬಣಗಳ ವಾರ್

ಮಲ್ಲಿಕಾರ್ಜುನ ಖರ್ಗೆ ಮಾತಿಗೂ ಡೋಂಟ್​​ ಕೇರ್​: ‘ಕೈ’ ಮನೆಯಲ್ಲಿ ನಿಲ್ಲದ ಬಣಗಳ ವಾರ್


ರಾಜ್ಯ ಕಾಂಗ್ರೆಸ್ ನಲ್ಲಿ ಬಾಣ ಬೇಗುದಿ

ಬೆಂಗಳೂರು, ಫೆಬ್ರವರಿ 15: ನಾಯಕತ್ವ ವಿಚಾರವಾಗಿ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಹೈಕಮಾಂಡ್ ಸೂಚನೆಯ ಬಳಿಕವೂ ರಾಜ್ಯ ಕಾಂಗ್ರೆಸ್ನಲ್ಲಿ ಬಾಣಗಳ ನಡುವಿನ ಸಂಘರ್ಷ ಮುಂದುವರಿದಿದೆ. ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್, ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್ ಕಚೇರಿ. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು, ಆದರೆ ಹೈಕಮಾಂಡ್‌ಗೆ ನಾವು ನೋಟಿಸ್ ಕೊಡಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಯತೀಂದ್ರ ನಮ್ಮ ಹೈಕಮಾಂಡ್ ಅಂತಾ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದಾರೆ. ಹೀಗಾಗಿ ನಾನೂ ಅದನ್ನೇ ಹೇಳುತ್ತೇನೆ, ಯತೀಂದ್ರ ನಮ್ಮ ಹೈಕಮಾಂಡ್ ಅನ್ನೋದನ್ನ ನೂರಕ್ಕೆ ನೂರರಷ್ಟು ಒಪ್ಪಿಕೊಳ್ತೇವೆ. ಯಾರೂ ಸ್ಟೇಟ್ಮೆಂಟ್ ಕೊಡಬೇಡಿ ಅಂತ ನಾಲ್ಕು ಬಾರಿ ಹೇಳಿದ್ರು. ಆದ್ರೂ ಸ್ಟೇಟ್ಮೆಂಟ್ ಕೊಡ್ತಿದ್ದಾರೆ ಅಂದ್ರೆ ಅವರೇ ಸುಪ್ರೀಂ. ಖರ್ಗೆಗಿಂತ ಜಾಸ್ತಿನಾ, ಡಿಕೆಗಿಂತ ಕಡಿಮೆನಾ ಅಂತಾ ಹೇಳಲು ಆಗಲ್ಲ. ಬೇಡ ಅಂದ್ರೂ ಮಾತನಾಡುತ್ತಿದ್ದಾರೆ ಅಂದ್ರೆ ಪವರ್ಫುಲ್ ಮ್ಯಾನ್ ಎಂದು ಹೇಳುವ ಮೂಲಕ ಪರೋಕ್ಷವಾಗಿ ಯತೀಂದ್ರ ವಿರುದ್ಧ ಗಣಿಗ ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಜೆಟ್ ಮಂಡನೆಗೆ ಸಿಎಂ ಸಜ್ಜು, ಪಟ್ಟದ ಪಟ್ಟು ಮತ್ತಷ್ಟು ಗಟ್ಟಿಗೊಳಿಸಿದ ಡಿಕೆಶಿ; ದೂರ ಉಳಿದ ಮಲ್ಲಿಕಾರ್ಜುನ ಖರ್ಗೆ

ಡಿ.ಕೆ.ಶಿವಕುಮಾರ್ ಸಿಎಂ ಆಗಲೇಬೇಕು ಎಂದಿರುವ ಅವರು, ಡಿಕೆಶಿ, ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಡಿ.ಕೆ.ಶಿವಕುಮಾರ್ ಅವರಿಗೆ ರಾಜಕೀಯ ತಂತ್ರಗಾರಿಕೆ, ಚಾಣಾಕ್ಷತನ ಇದೆ. ಯಾವಾಗ ಯಾವ ಪಾನ್ ಮೂವ್ ಮಾಡಿದ್ರೆ ಗೇಮ್ ಗೆಲ್ಲಬಹುದೆಂದು ಗೊತ್ತಿದೆ. ಬುದ್ಧಿವಂತಿಕೆ ಇರುವುದಕ್ಕೆ ಸೈಲೆಂಟಾಗಿ ಮೂವ್ ಮಾಡ್ತಿದ್ದಾರೆ. ರಾಜಕಾರಣ ಅಂದಮೇಲೆ ಆಟ ಇರಲೇಬೇಕು, ಆಟ ಬಿಡಲು ಆಗಲ್ಲ. ನಮ್ಮದು ಐರ್ಲೆಂಡ್ ಟೀಂ ಅಲ್ಲ, ಬಲಿಷ್ಠ ಭಾರತ ಟೀಂ. ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಡಿ.ಕೆ.ಶಿವಕುಮಾರ್ ಗೆ, ಪ್ರಶ್ನೆಗಳಿಗೆ ಶೀಘ್ರದಲ್ಲೇ ಉತ್ತರ ಬರಲಿದೆ.

ನಾಯಕತ್ವ ಗೊಂದಲದ ನಡುವೆ ಐಸಿಸಿ ಅಧ್ಯಕ್ಷ ಖರ್ಗೆ ನಾವೆಲ್ಲಾ ಜೊತೆಯಾಗಿ, ಒಗ್ಗಟ್ಟಾಗಿ ಹೋಗಬೇಕು ಎಂದು ಪಾಠ ಮಾಡಿದರು. ಭೀಮಣ್ಣ ಖಂಡ್ರೆ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭೀಮಣ್ಣ ಖಂಡ್ರೆ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಿದ್ದರು. ಆದರೆ ಪಕ್ಷ ಬಿಟ್ಟುದ್ರು ಅವರ ತತ್ವ, ಸಿದ್ಧಾಂತ ಹೋದದ್ದು. ಹೀಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕು ಎಂದು ಬಸವಣ್ಣನ ವಚನ ಹೇಳುವ ಮೂಲಕ ಸಂದೇಶ ನೀಡಿದ್ದರು. ಆದರೆ ಸದ್ಯ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಸೂಚನೆಯನ್ನೂ ಮೀರಿ ಮಾತಾಡುತ್ತಿರೋದು ಬಣ ಬಡಿದಾಟವನ್ನು ಇಮ್ಮಡಿಗೊಳಿಸಿದೆ. ವಿಪಕ್ಷಗಳಿಗೆ ಆಹಾರವಾಗ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *