ಭಾರತ ಎದುರು ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ; ಭಾರತ ತಂಡದಲ್ಲಿ ಎರಡು ಮೇಜರ್ ಚೇಂಜ್ | India Vs Pakistan T20 World Cup 2026 Pakistan Win Toss Team India Make Two Major Changes Kvn

ಭಾರತ ಎದುರು ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ; ಭಾರತ ತಂಡದಲ್ಲಿ ಎರಡು ಮೇಜರ್ ಚೇಂಜ್ | India Vs Pakistan T20 World Cup 2026 Pakistan Win Toss Team India Make Two Major Changes Kvn



ಭಾರತ ಎದುರು ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ; ಭಾರತ ತಂಡದಲ್ಲಿ ಎರಡು ಮೇಜರ್ ಚೇಂಜ್ | India Vs Pakistan T20 World Cup 2026 Pakistan Win Toss Team India Make Two Major Changes Kvn

ಟಿ20 ವಿಶ್ವಕಪ್‌ನ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮಹತ್ವದ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಅಭಿಷೇಕ್ ಶರ್ಮಾ ಮತ್ತು ಕುಲ್ದೀಪ್ ಯಾದವ್ ಅವರನ್ನು ಸೇರಿಸಿ ಎರಡು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. 

ಕೊಲಂಬೋ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ಬ್ಯಾಟರ್ ಸಲ್ಮಾನ್ ಅಲಿ ಅಘಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಪಂದ್ಯಕ್ಕೆ ಇಲ್ಲಿನ ಆರ್ ಪ್ರೇಮದಾಸ ಸ್ಟೇಡಿಯಂ ಆತಿಥ್ಯ ವಹಿಸಿದೆ.

ಹಾಲಿ ಚಾಂಪಿಯನ್ ಭಾರತ ತಂಡವು ಈಗಾಗಲೇ ತಾನಾಡಿದ ಮೊದಲ ಪಂದ್ಯದಲ್ಲಿ ಯುಎಸ್‌ಎ ಎದುರು ರೋಚಕ ಜಯ ಸಾಧಿಸಿತ್ತು. ಇದಾದ ಬಳಿಕ ನಮೀಬಿಯಾ ಎದುರಿನ ಪಂದ್ಯದಲ್ಲಿ ಸುಲಭ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇನ್ನೊಂದೆಡೆ ಪಾಕಿಸ್ತಾನ ತಂಡವು ತಾನಾಡಿದ ಮೊದಲ ಪಂದ್ಯದಲ್ಲಿ ನೆದರ್‌ಲ್ಯಾಂಡ್ ಎದುರು ಪರದಾಡಿ ಗೆಲುವು ಸಾಧಿಸಿತ್ತು. ಇದಾದ ಬಳಿಕ ಯುಎಸ್‌ಎ ಎದುರು 32 ರನ್ ಅಂತರದ ಗೆಲುವು ಸಾಧಿಸಿದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇಂದು ಗೆಲ್ಲುವ ತಂಡವು ಸೂಪರ್-8 ಹಾದಿಯನ್ನು ಖಚಿತಪಡಿಸಿಕೊಳ್ಳಲಿದೆ.

ಭಾರತ ತಂಡದಲ್ಲಿ ಎರಡು ಮೇಜರ್ ಚೇಂಜ್‌:

ಹೌದು, ಪಾಕಿಸ್ತಾನ ಎದುರಿನ ಮಹತ್ವದ ಪಂದ್ಯಕ್ಕೆ ಟೀಂ ಇಂಡಿಯಾ ಎರಡು ಮಹತ್ವದ ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಆರೋಗ್ಯದ ಸಮಸ್ಯೆಯಿಂದ ಅಭಿಷೇಕ್ ಶರ್ಮಾ ನಮೀಬಿಯಾ ಎದುರಿನ ಪಂದ್ಯದಿಂದ ಹೊರಗೊಳಿದಿದ್ದರು. ಇದೀಗ ಪಾಕ್ ಎದುರಿನ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಸಂಪೂರ್ಣ ಫಿಟ್ ಆಗಿದ್ದು, ಎರಡನೇ ಪಂದ್ಯಕ್ಕೆ ಲಭ್ಯವಾಗಿದ್ದಾರೆ. ರಿಂಕು ಸಿಂಗ್ ಸ್ಥಾನ ಉಳಿಸಿಕೊಂಡಿದ್ದಾರೆ. ಇನ್ನು ಅರ್ಶದೀಪ್ ಸಿಂಗ್ ಬದಲಿಗೆ ಕುಲ್ದೀಪ್ ಯಾದವ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಪಾಕಿಸ್ತಾನ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯದಲ್ಲೂ ಕಣಕ್ಕಿಳಿದಿದೆ.

ಉಭಯ ತಂಡಗಳು ಹೀಗಿವೆ ನೋಡಿ

ಭಾರತ: ಇಶಾನ್‌ ಕಿಶನ್‌, ಅಭಿಷೇಕ್‌ ಶರ್ಮಾ, ತಿಲಕ್‌ ವರ್ಮಾ, ಸೂರ್ಯಕುಮಾರ್‌ ಯಾದವ್(ನಾಯಕ), ಹಾರ್ದಿಕ್‌ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಕುಲ್ದೀಪ್ ಯಾದವ್, ಅಕ್ಷರ್‌, ವರುಣ್‌ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ಪಾಕಿಸ್ತಾನ: ಫರ್ಹಾನ್‌, ಸೈಮ್‌, ಸಲ್ಮಾನ್‌(ನಾಯಕ), ಬಾಬರ್‌ ಆಜಂ, ಶದಾಬ್‌, ಉಸ್ಮಾನ್‌ ಖಾನ್‌/ಜಮಾನ್‌, ನವಾಜ್‌, ಫಹೀಂ ಅಶ್ರಫ್‌, ಶಾಹೀನ್‌, ತಾರಿಖ್‌, ಅಬ್ರಾರ್‌.

ಪಂದ್ಯ ಆರಂಭ: ಸಂಜೆ 7 ಗಂಟೆಗೆ

ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್‌



Source link

Leave a Reply

Your email address will not be published. Required fields are marked *